ವಿಶ್ವಸಂಸ್ಥೆ ಸಾಮಾನ್ಯ ಸಭೆ
ನ್ಯೂಯಾರ್ಕ್ 22 ಸೆಪ್ಟೆಂಬರ್ (ಹಿ.ಸ): ಆ್ಯಂಕರ್ : ನ್ಯೂಯಾರ್ಕ್ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆ ಹಿ
ವಿಶ್ವಸಂಸ್ಥೆ ಸಾಮಾನ್ಯ ಸಭೆ


ನ್ಯೂಯಾರ್ಕ್ 22 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್ :

ನ್ಯೂಯಾರ್ಕ್ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್. ಜೈಶಂಕರ್ ಅವರು ಟರ್ಕಿ ವಿದೇಶಾಂಗ ಸಚಿವ ಮೆವ್ಲೂತ್ ಕಾವುಸೋಗ್ಲು ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಉಕ್ರೇನ್ ಸಂಘರ್ಷ, ಸೈಪ್ರೆಸ್ ವಿಚಾರ, ಆಹಾರ ಭದ್ರತೆ, ಅಲಿಪ್ತ ನೀತಿ, ಜಿ-೨೦ ಪ್ರಕ್ರಿಯೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ಸಚಿವ ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಉನ್ನತ ಮಟ್ಟದ ಪ್ರಾದೇಶಿಕ ಗುಂಪಿನ ಸಭೆ ಆಯೋಜಿಸಿದ್ದ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರೋನ್ ಅವರಿಗೆ ಸಚಿವ ಜೈಶಂಕರ್ ಕೃತಜ್ಞತೆ ಸಲ್ಲಿಸಿದರು

ಹಿಂದೂಸ್ತಾನ್ ಸಮಾಚಾರ್


 rajesh pande