ಬೆಳ್ಳಿ ಮತ್ತು ಚಿನ್ನದ ಬೆಲೆ ಇಂದು ಮತ್ತೆ ಕುಸಿತ;
ಮುಂಬೈ, 22 ಸೆಪ್ಟೆಂಬರ್ (ಹಿ.ಸ): ಆ್ಯಂಕರ್ : ಭಾರತದಲ್ಲಿ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದ
ಬೆಳ್ಳಿ ಮತ್ತು ಚಿನ್ನದ ಬೆಲೆ ಇಂದು ಮತ್ತೆ ಕುಸಿತ;


ಮುಂಬೈ, 22 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್ :

ಭಾರತದಲ್ಲಿ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿಯ ಬೆಲೆ ಇಂದು 600 ರೂ. ಕುಸಿತವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 45,950 ರೂ. ಇದ್ದುದು 45,800 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,130 ರೂ. ಇದ್ದುದು 49,960 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,200 ರೂ. ಮುಂಬೈ- 45,800 ರೂ, ದೆಹಲಿ- 45,950 ರೂ, ಕೊಲ್ಕತ್ತಾ- 45,800 ರೂ, ಬೆಂಗಳೂರು- 45,850 ರೂ, ಹೈದರಾಬಾದ್- 45,800 ರೂ, ಕೇರಳ- 45,800 ರೂ, ಪುಣೆ- 45,830 ರೂ, ಮಂಗಳೂರು- 45,850 ರೂ, ಮೈಸೂರು- 45,850 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,400 ರೂ, ಮುಂಬೈ- 49,960 ರೂ, ದೆಹಲಿ- 50,110 ರೂ, ಕೊಲ್ಕತ್ತಾ- 49,960 ರೂ, ಬೆಂಗಳೂರು- 50,040 ರೂ, ಹೈದರಾಬಾದ್- 49,960 ರೂ, ಕೇರಳ- 49,960 ರೂ, ಪುಣೆ- 49,990 ರೂ, ಮಂಗಳೂರು- 50,040 ರೂ, ಮೈಸೂರು- 50,040 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 600 ರೂ. ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,200 ರೂ. ಇದ್ದುದು ಇಂದು 56,600 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 61,800 ರೂ, ಮೈಸೂರು- 61,800 ರೂ., ಮಂಗಳೂರು- 61,800 ರೂ., ಮುಂಬೈ- 56,600 ರೂ, ಚೆನ್ನೈ- 61,800 ರೂ, ದೆಹಲಿ- 56,600 ರೂ, ಹೈದರಾಬಾದ್- 61,800 ರೂ, ಕೊಲ್ಕತ್ತಾ- 56,600 ರೂ. ಆಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande