ಹಿಜಾಬ್ ತೀರ್ಪು ಕಾಯ್ದಿರಿಸಿದ ಸುಪ್ರೀಂ
ನವ ದೆಹಲಿ, 22 ಸೆಪ್ಟೆಂಬರ್ (ಹಿ.ಸ): ಆ್ಯಂಕರ್ : ಸುಪ್ರೀಂಕೋರ್ಟ್ ನಲ್ಲಿ ಹಿಜಾಬ್ ಸಂಬಂಧ ಮೇಲ್ಮನವಿ ಅರ್ಜಿಗಳ ವಿಚಾರ
ೀುೀಾ


ನವ ದೆಹಲಿ, 22 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್ :

ಸುಪ್ರೀಂಕೋರ್ಟ್ ನಲ್ಲಿ ಹಿಜಾಬ್ ಸಂಬಂಧ ಮೇಲ್ಮನವಿ ಅರ್ಜಿಗಳ ವಿಚಾರಣೆ ಅಂತ್ಯವಾಗಿದ್ದು, ಹಿಜಾಬ್ ಕುರಿತು ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್ಗಳನ್ನು ನಿಷೇಧಿಸುವ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ್ದು, ಸುಪ್ರೀಂಕೋರ್ಟ್ ನಲ್ಲಿ ಇಂದು ಹಿಜಾಬ್ ಕುರಿತು ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ದ್ವಿಸದಸ್ಯಪೀಠ ಹಿಜಾಬ್ ಕುರಿತ ತೀರ್ಪನ್ನು ಕಾಯ್ದಿರಿಸಿದೆ.ಶಾಲಾ ಕಾಲೇಜುಗಳ ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ದೇಶಿಸಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ.

ಇಂದಿನ ವಾದವೇನು?

ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿದ ಕರ್ನಾಟಕ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸೇರಿದಂತೆ ಇದಕ್ಕೆ ಸಂಬಂಧಿಸಿದ ಅರ್ಜಿಗಳ ಮೇಲಿನ ೧೦ ನೇ ದಿನದ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಇಂದು ಸಹ ಮುಂದುವರೆಯಿತು.ಆರಂಭದಲ್ಲಿ ಅರ್ಜಿದಾರರ ಪರ ವಾದ ಮಂಡಿಸುತ್ತಿರುವ ವಕೀಲ ದುಶ್ಯಂತ ದವೆ ತಮ್ಮ ಮರುಪ್ರಶ್ನೆಗಳನ್ನು ನ್ಯಾಯಾಲಯದ ಮುಂದೆ ಮಂಡಿಸಲು ಆರಂಭಿಸಿದ್ದಾರೆ. ಸುತ್ತೋಲೆಯೊಂದನ್ನು ನ್ಯಾಯಾಲಯದ ಮುಂದಿಟ್ಟ ದವೆ, ಈ ಸುತ್ತೋಲೆಯಲ್ಲಿ ತುಂಬಾ ಕುತೂಹಲಕರವಾದ ವಿಷಯಗಳಿವೆ ಎಂದರು. ಸುತ್ತೋಲೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಬಗ್ಗೆ ಯಾವುದೇ ಉಲ್ಲೇಖವಿಲ್ಲ.. ಆದರೆ ಸಾಲಿಸಿಟರ್ ಜನರಲ್ ಅವರು ಆ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ಹೇಳಲು ನಾನು ವಿಷಾದಿಸುತ್ತೇನೆ.

ಆದರೆ ಆ ವಿಷಯ ಪ್ರಸ್ತುತವಲ್ಲ ಮತ್ತು ಅವರು ಅದನ್ನು ಎತ್ತಿದ್ದರಿಂದ ಇಡೀ ಮಾಧ್ಯಮಗಳು ಅದನ್ನು ಪ್ರಸಾರ ಮಾಡತೊಡಗಿದವು ಎಂದರು.ಪ್ರಕರಣದಲ್ಲಿ ದುಶ್ಯಂತ್ ದವೆ ಸದ್ಯಕ್ಕೆ ತಮ್ಮ ವಾದ ಮಂಡಿಸುತ್ತಿದ್ದು, ವಿಚಾರಣೆ ಮುಂದುವರಿದಂತೆ ಹೆಚ್ಚಿನ ವಿವರಗಳು ಬರಲಿವೆ.ಈ ಪ್ರಕರಣದ ಬುಧವಾರದ ವಿಚಾರಣೆಯಲ್ಲಿ, ಹಿಜಾಬ್ ಪ್ರತಿಭಟನೆ ದೊಡ್ಡ ಪಿತೂರಿಯ ಭಾಗವಾಗಿದೆ ಮತ್ತು ವಿದ್ಯಾರ್ಥಿಗಳು ಪಿಎಫ್ಐ ಸಲಹೆಯಂತೆ ವರ್ತಿಸುತ್ತಿದ್ದಾರೆ. ಈ ಪ್ರತಿಭಟನೆಯ ಹಿಂದೆ ಪಿಎಫ್ಐ ಪಾತ್ರ ಇದೆ ಎಂದು

ಹಿಂದೂಸ್ತಾನ್ ಸಮಾಚಾರ್


 rajesh pande