ರೇಷ್ಮೆ ಬೆಳೆಗಾರರ ಆರ್ಥಿಕ ಸಬಲೀಕರಣಕ್ಕೆ ಬದ್ಧ
ರಾಮನಗರ, 23 ಸೆಪ್ಟೆಂಬರ್ (ಹಿ.ಸ): ಆ್ಯಂಕರ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತಪರವಾದ ಕಾರ್ಯಕ್ರಮಗಳ ಮೂಲಕ ಉತ್ತಮವ
ರೇಷ್ಮೆ ಬೆಳೆಗಾರರ ಆರ್ಥಿಕ ಸಬಲೀಕರಣಕ್ಕೆ ಬದ್ಧ


ರಾಮನಗರ, 23 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತಪರವಾದ ಕಾರ್ಯಕ್ರಮಗಳ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ರೇಷ್ಮೆ ಬೆಳೆಗಾರರು ಮತ್ತು ರೀಲರ್ಗಳೊಂದಿಗೆ ಚರ್ಚೆ ನಡೆಸಿದು, ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಲಿದೆ ಎಂದು ಕೇಂದ್ರ ರೇಷ್ಮೆ ಖಾತೆ ರಾಜ್ಯ ಸಚಿವೆ ದರ್ಶನ ಜರ್ದೋಷ್ ಹೇಳಿದರು. ರಾಮನಗರ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಸಚಿವರು, ಜಪಾನಿನಲ್ಲಿ ರೇಷ್ಮೆ ಹೊರತಾಗಿಯೂ ಅದರ ಉಪ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಇದೇ ಮಾದರಿಯಲ್ಲಿ ನಮ್ಮ ದೇಶದಲ್ಲೂ ರೇಷ್ಮೆ ಉಪ ಉತ್ಪನ್ನ ತಯಾರಿಕೆಗೆ ಒತ್ತು ಕೊಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆತ್ಮನಿರ್ಭರ ಭಾರತಕ್ಕೆ ಉತ್ತೇಜನ ನೀಡುತ್ತಿದ್ದು, ಇದರಲ್ಲಿ ರೇಷ್ಮೆ ಉದ್ಯಮವೂ ಹೊರತಾಗಿಲ್ಲ ಎಂದರು. ಈ ಹಿಂದೆ ಚೀನಾದಿಂದ ರೇಷ್ಮೆ ಅಮದು ಮಾಡಿಕೊಳ್ಳಲಾಗುತ್ತಿತ್ತು. ದೇಶದ ಗಡಿಯಲ್ಲಿ ತಗಾದೆ ತಗೆಯುವ ರಾಷ್ಟ್ರದ ಜೊತೆ ವ್ಯಾಪಾರ ಸಂಬಂಧ ಹೊಂದಲು ಸಾಧ್ಯವಿಲ್ಲ. ದೇಶದ ರೈತರಿಗೆ ಬೇಡಿಕೆಗೆ ತಕ್ಕಂತೆ ಉತ್ಪಾದನೆ ಮಾಡುವ ಶಕ್ತಿಯಿದ್ದು, ಇದಕ್ಕೆ ಉತ್ತೇಜನ ನೀಡಲಾಗುತ್ತಿದೆ. ಇದಕ್ಕೆ ಹೊರತಾಗಿಯೂ ರೇಷ್ಮೆ ಉದ್ಯಮದ ಬೆಳವಣಿಗೆಗೆ ರಾಜ್ಯ ಸರ್ಕಾರ ಕೋರುವ ಯಾವುದೇ ನೆರವನ್ನು ನೀಡಲು ಕೇಂದ್ರ ಬದ್ದವಾಗಿದೆ ಎಂದು ಸಚಿವೆ ದರ್ಶನ ಜರ್ದೋಷ್ ಹೇಳಿದರು

ಹಿಂದೂಸ್ತಾನ್ ಸಮಾಚಾರ್


 rajesh pande