ರಾಷ್ಟ್ರಪತಿ ಗೆ ದಸರಾ ಮಹೋತ್ಸ ಆಹ್ವಾನ
ನವ ದೆಹಲಿ, 23 ಸೆಪ್ಟೆಂಬರ್ (ಹಿ.ಸ): ಆ್ಯಂಕರ್ ಪ್ರಸಕ್ತ ಸಾಲಿನ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗ
ರಾಷ್ಟ್ರಪತಿ ಗೆ ದಸರಾ ಮಹೋತ್ಸ ಆಹ್ವಾನ


ನವ ದೆಹಲಿ, 23 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್

ಪ್ರಸಕ್ತ ಸಾಲಿನ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಆಗಮಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ದೆಹಲಿಯಲ್ಲಿ ನಿನ್ನೆ ವಿದ್ಯುಕ್ತ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದರಾದ ಪ್ರತಾಪ್ ಸಿಂಹ, ಅಣ್ಣಾ ಸಾಹೇಬ್ ಜೊಲ್ಲೆ, ಮೇಯರ್ ಶಿವಕುಮಾರ್ ಉಪಸ್ಥಿತರಿದ್ದರು.ಬರುವ ಸೋಮವಾರದಂದು ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯೊಂದಿಗೆ ನಾಡಹಬ್ಬ ದಸರಾ ಆರಂಭವಾಗಲಿದೆ, ಅಂದು ಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿಯವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇದೇ ಪ್ರಥಮ ಬಾರಿಗೆ ರಾಷ್ಟ್ರಪತಿಯೊಬ್ಬರು ದಸರಾ ಮಹೋತ್ಸವಕ್ಕೆ ಚಾಲನೆ ನೀಡುತ್ತಿರುವುದು ಮಹತ್ವ ಎನಿಸಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande