ಭಾರತೀಯ ರೆಡ್ಕ್ರಾಸ್ ಸೊಸೈಟಿ ಮಾನವೀಯತೆ ಮೆರೆದಿದೆ
ನವ ದೆಹಲಿ, 23 ಸೆಪ್ಟೆಂಬರ್ (ಹಿ.ಸ): ಆ್ಯಂಕರ್ : ದೇಶದ ಆರೋಗ್ಯ ವ್ಯವಸ್ಥೆ ಬಲಪಡಿಸಬೇಕೆನ್ನುವುದನ್ನು ಕೋವಿಡ್ ಪರಿಸ್ಥಿ
ಭಾರತೀಯ ರೆಡ್ಕ್ರಾಸ್ ಸೊಸೈಟಿ ಮಾನವೀಯತೆ ಮೆರೆದಿದೆ


ನವ ದೆಹಲಿ, 23 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್ :

ದೇಶದ ಆರೋಗ್ಯ ವ್ಯವಸ್ಥೆ ಬಲಪಡಿಸಬೇಕೆನ್ನುವುದನ್ನು ಕೋವಿಡ್ ಪರಿಸ್ಥಿತಿ ನಮಗೆ ತೋರಿಸಿಕೊಟ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ. ಭಾರತ ಕೇವಲ ಕೋವಿಡ್ ವಿರುದ್ಧ ಹೋರಾಡಲಿಲ್ಲ. ಬದಲಾಗಿ ಮೈತ್ರಿ ಲಸಿಕೆ ಕಾರ್ಯಕ್ರಮದಡಿ ಜಗತ್ತಿನ ವಿವಿಧ ದೇಶಗಳಿಗೆ ಕೋವಿಡ್ ಲಸಿಕೆ ಮತ್ತು ಇನ್ನಿತರ ಔಷಧಿಗಳನ್ನು ಪೂರೈಕೆ ಮಾಡಿ, ಮಾನವೀಯತೆ ಮೆರೆದಿದೆ ಎಂದು ಹೇಳಿದರು. ಭಾರತೀಯ ರೆಡ್ಕ್ರಾಸ್ ಸೊಸೈಟಿ ಹಮ್ಮಿಕೊಂಡಿದ್ದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ನಾಯಕತ್ವ ಕುರಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮನ್ಸುಖ್ ಮಾಂಡವೀಯ, ಕೋವಿಡ್ ಸಂಕಷ್ಟದ ಸಮಯದಲ್ಲಿ ಸೊಸೈಟಿಗಳು ಅತ್ಯುತ್ತಮ ಪಾತ್ರ ನಿರ್ವಹಿಸಿವೆ ಎಂದು ಹೇಳಿದ್ದಾರೆ. ಅದರಲ್ಲೂ ಭಾರತೀಯ ರೆಡ್ಕ್ರಾಸ್ ಸೊಸೈಟಿ ಸಹಾಯ, ಮಾನವೀಯತೆಯನ್ನು ಮುಖ್ಯ ಧ್ಯೇಯವನ್ನಾಗಿಟ್ಟುಕೊಂಡು ಕೆಲಸ ಮಾಡಿದೆ. ಕಷ್ಟಕಾಲದಲ್ಲಿ ಅಗತ್ಯ ಔಷಧಿಗಳನ್ನು ಕೂಡಾ ಪೂರೈಕೆ ಮಾಡಿದೆ. ಈ ಮೂಲಕ ಭಾರತೀಯ ಸಂಪ್ರದಾಯವನ್ನು ಎತ್ತಿಹಿಡಿದಿದ್ದು, ಸೇವೆ ಮತ್ತು ಸಹಯೋಗದ ಪರಂಪರೆಗೆ ನಾಂದಿ ಹಾಡಿದೆ ಎಂದು ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande