ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಹಾರ ರಾಜ್ಯ ಪ್ರವಾಸ
ನವ ದೆಹಲಿ, 23 ಸೆಪ್ಟೆಂಬರ್ (ಹಿ.ಸ): ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನಗಳ ಬಿಹಾರ ಪ್ರವಾಸ
ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಹಾರ ರಾಜ್ಯ ಪ್ರವಾಸ


ನವ ದೆಹಲಿ, 23 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್ :

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನಗಳ ಬಿಹಾರ ಪ್ರವಾಸ ಕೈಗೊಳ್ಳಲಿದ್ದಾರೆ. ಪುರ್ನಿಯಾ ಮತ್ತು ಕೃಷ್ಣಗಂಜ್ನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಅಮಿತ್ ಶಾಪಾಲ್ಗೊಳ್ಳಲಿದ್ದಾರೆ. ಬಿಜೆಪಿ ಜತೆಗಿನ ಸಂಬಂಧವನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ-ಯು ಕಡಿತ ಮಾಡಿಕೊಂಡ ನಂತರ ಬಿಹಾರಕ್ಕೆ ಅಮಿತ್ ಶಾ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಪುರ್ನಿಯಾದ ರಂಗಭೂಮಿ ಮೈದಾನದಲ್ಲಿ ಹಮ್ಮಕೊಂಡಿರುವ ಜನ್ ಭಾವನಾ ಬೃಹತ್ ಸಮಾವೇಶದಲ್ಲಿ ಮಾತನಾಡಲಿದ್ದಾರೆ ಎಂದು ಬಿಹಾರ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್ ಹೇಳಿದ್ದಾರೆ. ಅಮಿತ್ ಶಾ ಅವರು ಬಿಹಾರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಬದಲಾವಣೆಯು ಪ್ರಮುಖ ಪಾತ್ರವಹಿಸಲಿದೆ ಎಂದು ಅವರು ತಿಳಿಸಿದ್ದಾರೆ. ಇದೇ ೨೪ರಂದು ಕೃಷ್ಣಗಂಜ್ನಲ್ಲಿ ಬಿಜೆಪಿ ಪಕ್ಷದ ಪದಾಧಿಕಾರಿಗಳನ್ನುದ್ದೇಶಿಸಿ ಅಮಿತ್ ಶಾ ಭಾಷಣ ಮಾಡಲಿದ್ದಾರೆ. ನಂತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande