ಅನುಷ್ಠಾನಗೊಳ್ಳದ ಬಾಕಿ ಇರುವ ಯೋಜನೆಗಳ ಜಾರಿ
ಮುಂಬೈ, 23 ಸೆಪ್ಟೆಂಬರ್ (ಹಿ.ಸ): ಆ್ಯಂಕರ್ : ಕೇಂದ್ರ ಹಣಕಾಸು ಸಚಿವೆ ಮತ್ತು ಬಿಜೆಪಿ ಹಿರಿಯ ನಾಯಕಿ ನಿರ್ಮಲಾ ಸೀತಾರಾ
ಅನುಷ್ಠಾನಗೊಳ್ಳದ ಬಾಕಿ ಇರುವ ಯೋಜನೆಗಳ ಜಾರಿ


ಮುಂಬೈ, 23 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್ :

ಕೇಂದ್ರ ಹಣಕಾಸು ಸಚಿವೆ ಮತ್ತು ಬಿಜೆಪಿ ಹಿರಿಯ ನಾಯಕಿ ನಿರ್ಮಲಾ ಸೀತಾರಾಮನ್, ಮಹಾರಾಷ್ಟ್ರದ ಬಾರಾಮತಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿದ್ದಾರೆ.

ಭಾರತೀಯ ಜನತಾ ಪಕ್ಷ ಮಹಾರಾಷ್ಟ್ರದ ೧೬ ಲೋಕಸಭಾ ಕ್ಷೇತ್ರಗಳ ಮೇಲೆ ವಿಶೇಷ ಗಮನಹರಿಸಿದ್ದು, ಅದರಲ್ಲಿ ಬಾರಾಮತಿ ಲೋಕಸಭಾ ಕ್ಷೇತ್ರವೂ ಒಂದಾಗಿದೆ. ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದ ನಿರ್ಮಲಾ ಸೀತಾರಾಮನ್, ಇದನ್ನು ಮುಂದಿನ ಲೋಕಸಭಾ ಚುನಾವಣೆಯ ಸಿದ್ಧತೆ ಪರಿಶೀಲಿಸುವ ಸಭೆ ಎಂದು ಪರಿಗಣಿಸುವ ಅಗತ್ಯವಿಲ್ಲ. ಮಹಾರಾಷ್ಟ್ರದಲ್ಲಿ ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುಷ್ಠಾನಗಳ ಕುರಿತು ಪ್ರಸ್ತುತ ಸ್ಥಿತಿಗತಿ ಪರಿಶೀಲಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು. ಕಾರ್ಪೊರೇಟ್ ವ್ಯವಹಾರಗಳ ಸಚಿವರೂ ಆಗಿರುವ ನಿರ್ಮಲಾ ಸೀತಾರಾಮನ್, ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಅನುಷ್ಠಾನಗೊಳ್ಳದ ಬಾಕಿ ಇರುವ ಯೋಜನೆಗಳ ಜಾರಿಗೆ ಮಹಾರಾಷ್ಟ್ರ ಸರ್ಕಾರ ಆದ್ಯತೆ ನೀಡಿದೆ ಎಂದು ಹೇಳಿದರು. ಮೂರು ದಿನಗಳ ಪ್ರವಾಸದ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್, ಆರು ವಿಧಾನಸಭಾ ಕ್ಷೇತ್ರಗಳಾದ ದೌಂದ್, ಇಂದಪುರ್, ಕಡಕ್ವಾಲ್ಸ, ಪುರಂದರ್, ಭೋರ್ ಮತ್ತು ಬಾರಾಮತಿ ವಿಧಾನಸಭಾ ಕ್ಷೇತ್ರಗಳ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬಾರಾಮತಿ ಕ್ಷೇತ್ರವನ್ನು ಸದ್ಯ ಎನ್ಸಿಪಿ ವರಿಷ್ಠ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಲೆ ಪ್ರತಿನಿಧಿಸುತ್ತಿದ್ದಾರೆ. ಕಳೆದ ೧೫ ದಿನಗಳ ಅವಧಿಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಮುಂಬೈನ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡಿರುವ ಯೋಜನೆ ಬಗ್ಗೆ ಜನರಿಗೆ ತಿಳಿಸುವ ಕೆಲಸ ಮಾಡಿದರು. ಇದೀಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ, ಪಕ್ಷದ ಕಾರ್ಯಕರ್ತರು ಮತ್ತು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande