ನಾಳೆ ಬೆಂಗಳೂರಿಗೆ ಕೇಂದ್ರ ಸಚಿವ ರಾಮ್ದಾಸ್ ಅಠಾವಳೆ
ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ): ಆ್ಯಂಕರ್ : ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮ್ದಾ
ುೀುೀ


ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್ :

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮ್ದಾಸ್ ಅಠಾವಳೆ ಒಂದು ದಿನದ ಭೇಟಿಗಾಗಿ ನಾಳೆ, ಶನಿವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ನಂತರ ಮೈಸೂರಿಗೆ ತೆರಳಿ ಅಲ್ಲಿ ನಡೆಯಲಿರುವ ’೯ ದಶಕಗಳ ರಾಜಕೀಯ ಮೀಸಲಾತಿ ; ವಿಷಯ, ಪರಿಣಾಮಗಳು ಮತ್ತು ಬದಲಾವಣೆ’ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬಳಿಕ ಬನ್ನಿಮಂಟಪದ ಸಮೀಪ ಕ್ಯಾಥೋಲಿಕ್ ಸೆಂಟರ್ ಆಡಿಟೋರಿಯಂನಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸುವರು. ಆನಂತರ ಸಮಾಜ ಕಲ್ಯಾಣ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುವರು. ಶನಿವಾರ ರಾತ್ರಿ ಬೆಂಗಳೂರಿಗೆ ಆಗಮಿಸಿ, ನಂತರ ಅವರು ಪುಣೆಗೆ ಪ್ರಯಾಣ ಬೆಳೆಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande