ಭಾರತ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಒತ್ತು
ದಾವೋಸ್, 21 ಜನವರಿ(ಹಿ.ಸ): ಆ್ಯಂಕರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಮಹಿಳಾ ನೇತೃತ್ವದ ಅಭಿವೃ
ಭಾರತ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಒತ್ತು


ದಾವೋಸ್, 21 ಜನವರಿ(ಹಿ.ಸ):

ಆ್ಯಂಕರ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ಆರ್ಥಿಕವಾಗಿ ಸಮಾನತೆಯನ್ನು ಕಾಯ್ದುಕೊಂಡು ಮಾದರಿಯಾಗಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಅವರು ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮಹಿಳಾ ಕೇಂದ್ರಿತ ನೀತಿ, ನಿರ್ಧಾರಗಳು ಮತ್ತು ಭಾರತದ ಪ್ರಗತಿಗಾಥೆಯಲ್ಲಿ ಮಹಿಳೆಯರಿಗೆ ಸಮಾನ ನ್ಯಾಯ ಕಲ್ಪಿಸಲು ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ಹವಾಮಾನ ವೈಪರೀತ್ಯ, ಆರೋಗ್ಯ ರಕ್ಷಣೆ, ಮಹಿಳಾ ನೇತೃತ್ವದ ಅಭಿವೃದ್ಧಿ ಹಾಗೂ ಡಿಜಿಟಲ್ ಮೂಲಸೌಕರ್ಯದಲ್ಲಿ ಭಾರತ ಕೈಗೊಂಡಿರುವ ಹಲವು ಕ್ರಮಗಳನ್ನು ವಿಶ್ವ ಆರ್ಥಿಕ ವೇದಿಕೆ ಗುರುತಿಸಿದೆ. ಜತೆಗೆ ಇದೀಗ ಭಾರತ ಜಿ-೨೦ ಅಧ್ಯಕ್ಷತೆಯನ್ನು ವಹಿಸಿಕೊಂಡು ಜಾಗತಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಮುಂದಾಗಿದೆ ಎಂದರು. ಇದಕ್ಕೂ ಮುನ್ನ ಜೀವನ ಶೈಲಿ ಬದಲಾವಣೆ ಕುರಿತಂತೆ ಗೋಷ್ಠಿಯಲ್ಲಿ ಮಾತನಾಡಿದ ಸ್ಮೃತಿ ಇರಾನಿ, ಭಾರತದ ಸಾಂಸ್ಕೃತಿಕ ಪರಂಪರೆಯಲ್ಲಿ ನಿಸರ್ಗದ ಸಂರಕ್ಷಣೆ ಮತ್ತು ಪೋಷಣೆ ಪರಿಕಲ್ಪನೆ ಅಂತರ್ಗತವಾಗಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್


 rajesh pande