ಆರ್ಥಿಕ ಸಮೀಕ್ಷೆ,ಸಂಸತ್ ನಲ್ಲಿ ಮಂಡನೆ
ನವದೆಹಲಿ, 31 ಜನವರಿ(ಹಿ.ಸ): ಆ್ಯಂಕರ್ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಕ್ತ ಹಣಕಾಸು ವರ್ಷ
araman presented Economic Survey in Parliment 


ನವದೆಹಲಿ, 31 ಜನವರಿ(ಹಿ.ಸ):

ಆ್ಯಂಕರ್ :

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಕ್ತ ಹಣಕಾಸು ವರ್ಷದ (2022-23) ಆರ್ಥಿಕ ಸಮೀಕ್ಷೆಯನ್ನು ಸಂಸತ್ನಲ್ಲಿ ಮಂಡನೆ ಮಾಡಿದರು. 2023-24ನೇ ಸಾಲಿನಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರ ಶೇ 6ರಿಂದ 6.8ರಷ್ಟಿರಲಿದೆ ಎಂದು ಸಮೀಕ್ಷೆ ಮುನ್ಸೂಚನೆ ನೀಡಿದೆ. ಇದು ಕಳೆದ ಮೂರು ವರ್ಷಗಳಲ್ಲೇ ನಿಧಾನಗತಿಯ ಜಿಡಿಪಿ ಬೆಳವಣಿಗೆ ಎಂದು ಅಂದಾಜಿಸಲಾಗಿದೆ. ಈ ಹಿಂದೆ 2023-24ನೇ ಸಾಲಿನಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರ ಶೇ 7 ಇರಬಹುದು ಎಂದು ಅಂದಾಜಿಸಲಾಗಿತ್ತು. ಪ್ರಸಕ್ತ ಹಣಕಾಸು ವರ್ಷಕ್ಕೆ ಹೋಲಿಸಿದರೆ ಮುಂದಿನ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆ ದರದ ಮುನ್ಸೂಚನೆ ತುಸು ಕಡಿಮೆ ಇದ್ದರೂ ವಿಶ್ವದ ಅತಿದೊಡ್ಡ ಆರ್ಥಿಕತೆಗಳ ಪೈಕಿ ಭಾರತವು ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ದೇಶವಾಗಿ ಹೊರಹೊಮ್ಮಿದೆ ಎಂದು ಆರ್ಥಿಕ ಸಮೀಕ್ಷೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande