ತಿರುಪತಿಗೆ ಭೇಟಿ ಕೊಟ್ಟ 'ಕಬ್ಜ' ತಂಡ
ಬೆಂಗಳೂರು, 16 ಮಾರ್ಚ್ (ಹಿ.ಸ): ಆ್ಯಂಕರ್ : ನಾಳೆ ವಿಶ್ವದಾದ್ಯಂತ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ. ಬಿಡುಗಡೆಗೂ ಒ
ೈೈ


ಬೆಂಗಳೂರು, 16 ಮಾರ್ಚ್ (ಹಿ.ಸ):

ಆ್ಯಂಕರ್ :

ನಾಳೆ ವಿಶ್ವದಾದ್ಯಂತ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ. ಬಿಡುಗಡೆಗೂ ಒಂದು ದಿನ ಮುನ್ನ ಕಬ್ಜ ಟೀಮ್ ತಿರುಪತಿಯತ್ತ ಪ್ರಯಾಣ ಬೆಳೆಸಿದೆ. ವಿಶೇಷ ವಿಮಾನದಲ್ಲಿ ನಟ ಉಪೇಂದ್ರ , ನಿರ್ದೇಶಕ ಆರ್.ಚಂದ್ರು , ಕೆ.ಪಿ ಶ್ರೀಕಾಂತ್ ಸೇರಿದಂತೆ ಹಲವರು ಬೆಳಗ್ಗೆ ಪ್ರಯಾಣ ಬೆಳೆಸಿದ್ದಾರೆ. ತಿರುಪತಿ ತಿಮ್ಮಪ್ಪನ ದರ್ಶನ ಪಡೆದು, ಅಧಿಕೃತವಾಗಿ ಚಿತ್ರದ ಬಿಡುಗಡೆಗೆ ಚಾಲನೆ ನೀಡಲಿದ್ದಾರೆ.

ನಾಳೆ ವಿಶ್ವದಾದ್ಯಂತ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ. ಬಿಡುಗಡೆಗೂ ಒಂದು ದಿನ ಮುನ್ನ ಕಬ್ಜ ಟೀಮ್ ತಿರುಪತಿಯತ್ತ ಪ್ರಯಾಣ ಬೆಳೆಸಿದೆ. ವಿಶೇಷ ವಿಮಾನದಲ್ಲಿ ನಟ ಉಪೇಂದ್ರ , ನಿರ್ದೇಶಕ ಆರ್.ಚಂದ್ರು ), ಕೆ.ಪಿ ಶ್ರೀಕಾಂತ್ ಸೇರಿದಂತೆ ಹಲವರು ಬೆಳಗ್ಗೆ ಪ್ರಯಾಣ ಬೆಳೆಸಿದ್ದಾರೆ. ತಿರುಪತಿ ತಿಮ್ಮಪ್ಪನ ) ದರ್ಶನ ಪಡೆದು, ಅಧಿಕೃತವಾಗಿ ಚಿತ್ರದ ಬಿಡುಗಡೆಗೆ ಚಾಲನೆ ನೀಡಲಿದ್ದಾರೆ.

ಮೊನ್ನೆಯಷ್ಟೇ ಈ ಸಿನಿಮಾದ ಪ್ರಿ ಇವೆಂಟ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದ್ದು, ಆ ಕಾರ್ಯಕ್ರಮದಲ್ಲಿ ಚಿತ್ರತಂಡ ಹಲವಾರು ವಿಷಯಗಳನ್ನು ಹಂಚಿಕೊಂಡಿದೆ. ವಿಶ್ವದಾದ್ಯಂತ ನಾಲ್ಕು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಐದು ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ. ಈ ಸಮಯದಲ್ಲಿ ಕಬ್ಜ 2 ಸಿನಿಮಾದ ಬಗ್ಗೆ ಸುಳಿವು ನೀಡಿದ್ದಾರೆ ನಟ ಉಪೇಂದ್ರ. ನಿನ್ನೆ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಬ್ಜ 2 ಸಿನಿಮಾದಲ್ಲಿ ನನಗೆ ಅತಿಥಿ ಪಾತ್ರ ಕೊಡಿ, ಸುದೀಪ್ ಅವರನ್ನು ಹೀರೋ ಆಗಿ ಮಾಡಿ ಎಂದು ನಿರ್ದೇಶಕರಲ್ಲಿ ಮನವಿ ಮಾಡಿಕೊಂಡರು.

ಹಿಂದೂಸ್ತಾನ್ ಸಮಾಚಾರ್


 rajesh pande