ಶಕ್ತಿಕಾಂತ್ ದಾಸ್ ಗೆ, ಗವರ್ನರ್ ಪ್ರಶಸ್ತಿ
ನವದಹೆಲಿ, 17 ಮಾರ್ಚ್ (ಹಿ.ಸ): ಆ್ಯಂಕರ್ : ಭಾರತೀಯ ರಿಸರ್ವ್ ಬ್ಯಾಂಕ್ - ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ
ಮಮ


ನವದಹೆಲಿ, 17 ಮಾರ್ಚ್ (ಹಿ.ಸ):

ಆ್ಯಂಕರ್ :

ಭಾರತೀಯ ರಿಸರ್ವ್ ಬ್ಯಾಂಕ್ - ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಇಂಟರ್ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ ೨೦೨೩ನೇ ಸಾಲಿನ ವರ್ಷದ ಗವರ್ನರ್ ಪ್ರಶಸ್ತಿ ದೊರೆತಿದೆ.

ಸೆಂಟ್ರಲ್ ಬ್ಯಾಂಕಿಂಗ್ ಅವಾರ್ಡ್ಸ್ ೨೦೨೩ರಲ್ಲಿ ವರ್ಷದ ಗವರ್ನರ್ ಪ್ರಶಸ್ತಿಯನ್ನು ಪಡೆದ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಸಂದೇಶ ನೀಡಿರುವ ಪ್ರಧಾನಮಂತ್ರಿ ನರೇಂದ್ರಮೋದಿ ಅವರು, ಶಕ್ತಿಕಾಂತ್ ದಾಸ್ ಅವರಿಗೆ ಪ್ರಶಸ್ತಿ ದೊರೆತಿರುವುದು ದೇಶಕ್ಕೆ ಹೆಮ್ಮೆಯ ವಿಷಯವಾಗಿದೆ. ಎಂದು ಹೇಳಿದ್ದಾರೆ.

ಕೋವಿಡ್ ೧೯ ಮತ್ತು ಉಕ್ರೇನ್- ರಷ್ಯಾ ನಡುವಿನ ಯುದ್ಧದಿಂದಾಗಿ ಸೃಷ್ಟಿಯಾದ ಬಿಕ್ಕಟ್ಟನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಕ್ಕೆ ಅಂತಾರಾಷ್ಟ್ರೀಯ ಸೆಂಟ್ರಲ್ ಬ್ಯಾಂಕಿಂಗ್ ವರ್ಷದ ಗವರ್ನರ್ ಪ್ರಶಸ್ತಿಗೆ ಭಾಜರಾಗಿದ್ದಾರೆ.

ಹಣದುಬ್ಬರ ಮತ್ತು ಹಲವು ಸವಾಲಿನ ಮಧ್ಯೆಯೂ ಶಕ್ತಿಕಾಂತ್ ದಾಸ್ ಅವರ ಸ್ಥಿರ ನಾಯಕತ್ವ ಸ್ಮರಣೀಯವಾಗಿದೆ. ಹಣದುಬ್ಬರ ನಿಯಂತ್ರಿಸಲು ರೆಪೋ ದರಗಳನ್ನು ಹೆಚ್ಚಿಸುವುದು ಸೇರಿದಂತೆ ಹಲವಾರು ಆರ್ಥಿಕ ಸುಧಾರಣೆ ಕ್ರಮಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಕೈಗೊಂಡಿತ್ತು.

ನೂತನ ಡಿಜಿಟಲ್ ಪಾವತಿ ವ್ಯವಸ್ಥೆಗಳನ್ನು ಪರಿಚಯಿಸಿದ್ದು, ತೀವ್ರವಾದ ಒತ್ತಡ ಮತ್ತು ಆರ್ಥಿಕ ಸಂಕಷ್ಟದ ನಡುವೆಯೂ ಆರ್ಬಿಐಯನ್ನು ಶಕ್ತಿಕಾಂತ್ದಾಸ್ ಅವರು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಭಾರತೀಯ ಸೆಂಟ್ರಲ್ ಬ್ಯಾಂಕ್ನ ಗವರ್ನರ್ ಈ ಪ್ರಶಸ್ತಿಯನ್ನು ಗೆದ್ದಿರುವುದು ಇದು ಎರಡನೇ ಬಾರಿ. ಶಕ್ತಿಕಾಂತ್ ದಾಸ್ಗೂ ಮೊದಲು, ರಘುರಾಮ್ ರಾಜನ್ ಅವರು ೨೦೧೫ ರಲ್ಲಿ ’ವರ್ಷದ ಗವರ್ನರ್’ ಪ್ರಶಸ್ತಿಯನ್ನು ಪಡೆದಿದ್ದರು.

ಸಾರ್ವಜನಿಕ ನೀತಿ ಮತ್ತು ಹಣಕಾಸು ಮಾರುಕಟ್ಟೆಗಳಲ್ಲಿ ಪರಿಣತಿ ಹೊಂದಿರುವ ಸೆಂಟ್ರಲ್ ಬ್ಯಾಂಕಿಂಗ್ ಕೇಂದ್ರೀಯ ಬ್ಯಾಂಕುಗಳು ಮತ್ತು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳ ಮೇಲೆ ಅಧ್ಯಯನ ನಡೆಸುತ್ತದೆ.

ಹಿಂದೂಸ್ತಾನ್ ಸಮಾಚಾರ್


 rajesh pande