ಬೆಂಗಳೂರು, 17 ಮಾರ್ಚ್ (ಹಿ.ಸ):
ಆ್ಯಂಕರ್ :ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವನ್ನು ಅಭಿಮಾನಿಗಳು ರಾಜ್ಯಾದ್ಯಂತ ಆಚರಿಸುತ್ತಿದ್ದಾರೆ. ಅಪ್ಪು ಪುಣ್ಯಭೂಮಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6ರ ತನಕ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರೆ, ರಾಜ್ಯದ ನಾನಾ ಕಡೆಗಳಲ್ಲಿ ಅಭಿಮಾನಿಗಳು ಹಲವು ರೀತಿಯಲ್ಲಿ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಆಚರಿಸುತ್ತಾರೆ. ಅಪ್ಪು ನಮ್ಮೊಂದಿಗೆ ದೈಹಿಕವಾಗಿ ಇಲ್ಲವೆಂದರೆ ಸಂಭ್ರಮಕ್ಕೇನೂ ಕೊರತೆ ಕಾಣುತ್ತಿಲ್ಲ.
ಹಿಂದೂಸ್ತಾನ್ ಸಮಾಚಾರ್