ವಿಜಯನಗರ ಎಸಿಪಿ ರವಿ ವಿರುದ್ಧ ದೂರು
ಬೆಂಗಳೂರು, 18 ಮಾರ್ಚ್ (ಹಿ.ಸ): ಆ್ಯಂಕರ್ : ವ್ಯಾಪಕ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ವಿಜಯನಗರ ಎಸಿಪಿ ರವಿ ಅವರು
ವಿಜಯನಗರ ಎಸಿಪಿ ರವಿ ವಿರುದ್ಧ ದೂರು


ಬೆಂಗಳೂರು, 18 ಮಾರ್ಚ್ (ಹಿ.ಸ):

ಆ್ಯಂಕರ್ : ವ್ಯಾಪಕ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ವಿಜಯನಗರ ಎಸಿಪಿ ರವಿ ಅವರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಕಾಂಗ್ರೆಸ್ ಏಜೆಂಟರಂತೆ ವರ್ತಿಸಿ ಸುಳ್ಳು ದೂರು ದಾಖಲಿಸಿ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಅಮಾನತು ಮಾಡುವಂತೆ ಒತ್ತಾಯಿಸಿ ಗೋವಿಂದರಾಜನಗರ ಮತ್ತು ವಿಜಯನಗರದ ಮಾಜಿ ಕಾರ್ಪೊರೇಟರ್ ಗಳು ಮತ್ತು ಹಿರಿಯ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಪೊಲೀಸ್ ಕಮಿಷನರ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದರು. ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಹೆಚ್.ರವೀಂದ್ರ, ಕೆ.ಉಮೇಶ್ ಶೆಟ್ಟಿ ,ಮೋಹನ್ ಕುಮಾರ್,ಡಾ.ಎಸ್.ರಾಜು,ದಾಸೇಗೌಡರು ಪ್ರಮುಖ ಬಿಜೆಪಿ ಮುಖಂಡರುಗಳು ಕ್ರಮ ಕೈಗೊಳ್ಳುವಂತೆ ಬೆಂಗಳೂರುನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್


 rajesh pande