ಕಾಶಿ ವಿಶ್ವನಾಥ ದೇವಸ್ಥಾನಕ್ಕೆ 100 ಬಾರಿ ಯೋಗಿ ಭೇಟಿ, ದಾಖಲೆ
ವಾರಣಾಸಿ, 18 ಮಾರ್ಚ್ (ಹಿ.ಸ): ಆ್ಯಂಕರ್ : ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇವಾಲಯಕ್ಕೆ ಕಳೆದ ಆರು ವರ್ಷಗಳಲ್ಲಿ 100
ಕಾಶಿ ವಿಶ್ವನಾಥ ದೇವಸ್ಥಾನಕ್ಕೆ 100 ಬಾರಿ ಯೋಗಿ ಭೇಟಿ, ದಾಖಲೆ


ವಾರಣಾಸಿ, 18 ಮಾರ್ಚ್ (ಹಿ.ಸ):

ಆ್ಯಂಕರ್ : ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇವಾಲಯಕ್ಕೆ ಕಳೆದ ಆರು ವರ್ಷಗಳಲ್ಲಿ 100 ನೇ ಬಾರಿಗೆ ಭೇಟಿ ನೀಡಿದ ಉತ್ತರ ಪ್ರದೇಶದ ಮೊದಲ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2017ರಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಸರಾಸರಿ 21 ದಿನಗಳಿಗೊಮ್ಮೆ ದೇವಸ್ಥಾನಕ್ಕೆ ಬಂದು ಬಾಬಾ ವಿಶ್ವನಾಥನ ಆರಾಧನೆ ಹಾಗೂ ‘ಷೋಡಶೋಪಚಾರ’ ವಿಧಾನದ ಮೂಲಕ ರಾಜ್ಯದ ಹಾಗೂ ದೇಶದ ಜನತೆಯ ಕಲ್ಯಾಣಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ ಎಂದು ಸರ್ಕಾರದ ಅಧಿಕೃತ ಹೇಳಿಕೆ ಈ ವಿಷಯ ತಿಳಿಸಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 113 ನೇ ಬಾರಿಗೆ ವಾರಣಾಸಿಗೆ ಎರಡು ದಿನಗಳ ಭೇಟಿ ನೀಡಿದ್ದಾರೆ.. ಇದೇ ಸಂದರ್ಭದಲ್ಲಿ ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಯೋಗಿ ಆದಿತ್ಯನಾಥ್ತಿಂಗಳಿಗೊಮ್ಮೆಯಾದರೂ ಕಾಶಿಗೆ ಭೇಟಿ ನೀಡುತ್ತಿದ್ದು, ಪ್ರತಿ ಭೇಟಿಯಲ್ಲೂ ನಗರದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಕ್ಷೇತ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮೊದಲ ಬಾರಿಗೆ ಉತ್ತರ ಪ್ರದೇಶದ ಅಧಿಕಾರ ವಹಿಸಿಕೊಂಡ ನಂತರ, ಯೋಗಿ ಆದಿತ್ಯನಾಥ್ ಅವರು ಆಶೀರ್ವಾದ ಪಡೆಯಲು 2017 ರಿಂದ ಮಾರ್ಚ್ 2022 ರವರೆಗೆ 74 ಬಾರಿ ಭಗವಾನ್ ವಿಶೇಶ್ವರನನ್ನು ಭೇಟಿ ಮಾಡಿದ್ದರು ಎಂದು ತಿಳಿಸಿದೆ.

ಸನಾತನ ಧರ್ಮ ಮತ್ತು ಬಾಬಾ ವಿಶ್ವನಾಥರ ಮೇಲಿನ ಅಪಾರ ಭಕ್ತಿಗೆ ಸಿಎಂ ಯೋಗಿ ಅವರ ಭೇಟಿಯೇ ಸಾಕಷ್ಟು ಪುರಾವೆ ಎನ್ನುತ್ತಾರೆ ಕಾಶಿ ವಿಶ್ವನಾಥ ದೇವಸ್ಥಾನದ ಅರ್ಚಕ ನೀರಜ್ ಕುಮಾರ್ ಪಾಂಡೆ.

ಕಳೆದ ವರ್ಷ ಸೆಪ್ಟೆಂಬರ್ 9 ರಂದು, ಮುಖ್ಯಮಂತ್ರಿಗಳು ವಾರಣಾಸಿಗೆ 100 ನೇ ಬಾರಿಗೆ ಭೇಟಿ ನೀಡಿದಾಗ ಅವರು 88 ನೇ ಬಾರಿಗೆ ಶ್ರೀಕಾಶಿ ವಿಶ್ವನಾಥ ಧಾಮಕ್ಕೆ ಭೇಟಿ ನೀಡಿದ್ದರು. ಅಂದಿನಿಂದ ಮಾರ್ಚ್ 18 ರವರೆಗೆ ಮುಖ್ಯಮಂತ್ರಿಗಳು 12 ಬಾರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande