ಕೇಂದ್ರ ಸಚಿವ ಪಿಯೂಶ್ ಗೋಯಲ್ ಕರ್ನಾಟಕಕ್ಕೆ ಭೇಟಿ
ಬೆಂಗಳೂರು, 18 ಮಾರ್ಚ್ (ಹಿ.ಸ): ಆ್ಯಂಕರ್ : ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು
ೋೋ


ಬೆಂಗಳೂರು, 18 ಮಾರ್ಚ್ (ಹಿ.ಸ):

ಆ್ಯಂಕರ್ :

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಪೂರೈಕೆ, ಜವಳಿ ಖಾತೆ ಸಚಿವ ಪಿಯೂಶ್ ಗೋಯಲ್ ಕರ್ನಾಟಕಕ್ಕೆ ಇಂದಿನಿಂದ ಎರಡು ದಿನ ಭೇಟಿ ನೀಡಲಿದ್ದಾರೆ. ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿರುವ ಅವರು, ವಿವಿಪುರಂನಲ್ಲಿರುವ ಆರ್ಯವೈಶ್ಯ ಸಮುದಾಯದ ವರ್ತಕರೊಂದಿಗೆ ಸಂವಾದ ನಡೆಸಲಿದ್ದಾರೆ. ನಾಳೆ, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರು, ಎಂಎಸ್ಎಂಇ ಉತ್ಪಾದಕರ ವಲಯದ ಸಮಾವೇಶ ಸೇರಿದಂತೆ ವಿವಿಧ ಕಾರ್ಯಕ್ರಮಗಲ್ಲಿ ಪಾಲ್ಗೊಳ್ಳುವರು. ಹುಬ್ಬಳ್ಳಿಯಲ್ಲಿ ಲೆಕ್ಕಪರಿಶೋಧಕರ ಜೊತೆ ಸಂವಾದ ನಡೆಸಲಿದ್ದು, ಮತ್ತು ಹುಬ್ಬಳ್ಳಿಯ ವಿಶ್ವದ ಅತಿ ದೊಡ್ಡ ರೈಲ್ವೆ ಪ್ಲಾಟ್ಫಾರಂ ಭೇಟಿ ನೀಡುವರು.

ಹಿಂದೂಸ್ತಾನ್ ಸಮಾಚಾರ್


 rajesh pande