ಜೆಡಿಎಸ್ ಪಕ್ಷದ ವತಿಯಿಂದ ಪರಿಶಿಷ್ಟ ಜಾತಿ, ಪಂಗಡಗಳ ಸಮಾವೇಶ
ಕೋಲಾರ, ೧೮ ಮಾರ್ಚ್ (ಹಿ.ಸ) : ಆ್ಯಂಕರ್ : ಮಾರ್ಚ್ ೨೫ ರಂದು ನಗರದಲ್ಲಿ ನಡೆಯಲಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿ
ಕೋಲಾರದಲ್ಲಿ ಜೆಡಿಎಸ್ ಆಶ್ರಯದಲ್ಲಿ ನಡೆಯಲಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು.


ಕೋಲಾರ, ೧೮ ಮಾರ್ಚ್ (ಹಿ.ಸ) :

ಆ್ಯಂಕರ್ : ಮಾರ್ಚ್ ೨೫ ರಂದು ನಗರದಲ್ಲಿ ನಡೆಯಲಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ವತಿಯಿಂದ ಎಸ್ಪಿ ಎಸ್ಟಿ ಸಮುದಾಯದ ಸಮಾವೇಶವನ್ನು ಯಶಸ್ವಿಗೊಳಿಸಲು ಶನಿವಾರ ನಗರದ ಜೆಡಿಎಸ್ ಪಕ್ಷದ ಕಛೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ನರಸಾಪುರ ಹೋಬಳಿ ವ್ಯಾಪ್ತಿಯ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜೆಡಿಎಸ್ ಪಕ್ಷದ ಎಸ್ಪಿ ಘಟಕದ ರಾಜ್ಯ ಕಾರ್ಯದರ್ಶಿ ರಾಮಸಂದ್ರ ತಿರುಮಲೇಶ್ ದಲಿತರನ್ನು ಮತ್ತು ಅಲ್ಪಸಂಖ್ಯಾತರ ಸಮುದಾಯವನ್ನು ನಂಬಿಕೊAಡು ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಸಿದ್ದರಾಮಯ್ಯ ಬಂದಿದ್ದಾರೆ ಜೆಡಿಎಸ್ ಪಕ್ಷದ ಈ ಸಮಾವೇಶವೇ ಕಾಂಗ್ರೆಸ್ ಪಕ್ಷಕ್ಕೆ ಉತ್ತರ ನೀಡಬೇಕು ಜೊತೆಗೆ ನಾವು ಎಲ್ಲರೂ ಒಗ್ಗಟ್ಟಿನಿಂದ ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಯಶಸ್ವಿಗೊಳಿಸೋಣ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಟಮೋಟ ಮಾರುವ ವ್ಯಕ್ತಿಯ ಶಕ್ತಿ ಏನೆಂಬುದನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ತೋರಿಸೋಣ ಎಂದರು.

ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರ ಕೈಗೊಂಡ ಯೋಜನೆಗಳ ಅನುಕೂಲಗಳ ಬಗ್ಗೆ ಮನೆ ಮನೆಗೆ ತಲುಪಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮುಖಂಡರು ಒಟ್ಟಿಗೆ ಸೇರಿ ಮಾಡೋಣ ಜೊತೆಗೆ ಮಹಿಳೆಯರಿಗೆ, ಯುವಕರಿಗೆ ದೀನದಲಿತರ ಅಭಿವೃದ್ಧಿಗೆ ಕುಮಾರಸ್ವಾಮಿ ಅಧಿಕಾರಕ್ಕೆ ಬಂದರೆ ಕೈಗೊಳ್ಳಲಿರುವ ಯೋಜನೆಗಳನ್ನು ಮತದಾರರಿಗೆ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಬೇಕು ನಮ್ಮ ಎಲ್ಲರ ಉದ್ದೇಶ ಮತ್ತು ಗುರಿ ಸಿಎಂಆರ್ ಶ್ರೀನಾಥ್ ಅವರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳಸಿಕೊಡಬೇಕು ಎಂದರು.

ಈ ಸಂದರ್ಭದಲ್ಲಿ ಮುಖಂಡ ದಲಿತ ಮುಖಂಡ ವೇಣು ಮಾತನಾಡಿ ದಲಿತರನ್ನು ರಾಜಕೀಯವಾಗಿ ನಿರ್ಲಕ್ಷ್ಯ ತೋರಿರುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷವನ್ನು ದೂರವಿಟ್ಟು ಜೆಡಿಎಸ್ ಪಕ್ಷವನ್ನು ಬೆಂಬಲಿಸೋಣ ಕೋಲಾರ ವಿಧಾನಸಭಾ ಕ್ಷೇತ್ರದ ಆಡಳಿತ ವ್ಯವಸ್ಥೆಯನ್ನು ಸರಿ ಮಾಡಲು ಸೂಕ್ತವಾದ ವ್ಯಕ್ತಿ ಸಿಎಂಆರ್ ಶ್ರೀನಾಥ್ ಅವರಿಂದ ಮಾತ್ರವೇ ಸಾಧ್ಯವಾಗುತ್ತದೆ ಅನಿಟ್ಟಿನಲ್ಲಿ ಸಿಎಂಆರ್ ಶ್ರೀನಾಥ್ ಅವರನ್ನು ಬೆಂಬಲಿಸಲು ಈ ಎಸ್ಸಿ ಎಸ್ಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು ದಲಿತರ ಶಕ್ತಿ ಏನೆಂದು ತೋರಿಸೋಣ ಎಂದರು.

ಸಭೆಯಲ್ಲಿ ಹಿರಿಯ ದಲಿತ ಮುಖಂಡ ಅಶ್ವಥ್ ಅಂತ್ಯೋಜಯ ಮಾತನಾಡಿ ರಾಜ್ಯದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ಕೊಟ್ಟಂತ ಪಕ್ಷ ಏನಾದರೂ ಇದ್ದರೆ ಅದು ಜೆಡಿಎಸ್ ಪಕ್ಷದಿಂದ ಮಾತ್ರವೇ ಸಮುದಾಯದ ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ ಸೌಲಭ್ಯಗಳನ್ನು ನೀಡುತ್ತದೆ ಅನಿಟ್ಟಿನಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಲು ಈ ಸಮಾವೇಶವನ್ನು ಯಶಸ್ವಿಗೊಳಿಸೋಣ ಎಂದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಬಾಲಾಜಿ ಚನ್ನಯ್ಯ, ಕಲಾ ರಮೇಶ್, ಗೋವಿಂದಪ್ಪ, ಶಿವಣ್ಣ, ಕಾಶಿ, ಚೇತನ್ ಬಾಬು, ಸಿಎಂಆರ್ ಪದ್ಮನಾಭ, ಸಿಎಂಆರ್ ಹರೀಶ್,ಡಾಬಾ ಶಂಕರ್, ಖಾಜಿಕಲ್ಲಹಳ್ಳಿ ಹರೀಶ್, ಶಿವು, ಮುಂತಾದವರು ಸಭೆಯಲ್ಲಿ ಇದ್ದರು

ಚಿತ್ರ : ಕೋಲಾರದಲ್ಲಿ ಜೆಡಿಎಸ್ ಆಶ್ರಯದಲ್ಲಿ ನಡೆಯಲಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು.


 rajesh pande