ಡೊಳ್ಳು ಕುಣಿತ: ಸರಳಾದೇವಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಬಳ್ಳಾರಿ, 20 ಮಾರ್ಚ್ (ಹಿ.ಸ): ಆ್ಯಂಕರ್: ನೆಹರು ಯುವಕೇಂದ್ರದಿಂದ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಉತ್ಸ
ಡೊಳ್ಳು ಕುಣಿತ: ಸರಳಾದೇವಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ


ಬಳ್ಳಾರಿ, 20 ಮಾರ್ಚ್ (ಹಿ.ಸ):

ಆ್ಯಂಕರ್: ನೆಹರು ಯುವಕೇಂದ್ರದಿಂದ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಉತ್ಸವ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ(ಸ್ವಾಯತ್ತ)ನ ನಾಟಕ ವಿಭಾಗದ ವಿದ್ಯಾರ್ಥಿಗಳು ಡೊಳ್ಳುಕುಣಿತದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಕೆ ಮಂಜುನಾಥ ರೆಡ್ಡಿ, ನಾಟಕ ವಿಭಾಗದ ಮುಖ್ಯಸ್ಥ ಡಾ.ದಸ್ತಗೀರಸಾಬ್ ದಿನ್ನಿ, ಸಾಂಸ್ಕøತಿಕ ಸಮಿತಿಯ ಸಂಚಾಲಕರಾದ ಡಾ.ಶಶಿಕಾಂತ್ ಬಿಲ್ಲವ, ಪರೀಕ್ಷಾ ನಿಯಂತ್ರಕರಾದ ಡಾ.ಬಿ.ಶೋಭಾರಾಣಿ, ನಾಟಕ ವಿಭಾಗದ ಅತಿಥಿ ಉಪನ್ಯಾಸಕರಾದ ವಿಷ್ಣು ಹಡಪದ ಅವರು ಅಭಿನಂದಿಸಿದ್ದಾರೆ.


 rajesh pande