ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ವಹಿಸಿ: ಜಿಪಂ ಸಿಇಒ
ಹೊಸಪೇಟೆ, 20 ಮಾರ್ಚ್ (ಹಿ.ಸ): ಆ್ಯಂಕರ್: ಭವ್ಯ ಭಾರತದ ಮುಂದಿನ ಪ್ರಜೆಗಳಾಗುವ ನೀವು ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತ
ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ವಹಿಸಿ: ಜಿಪಂ ಸಿಇಒ


ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ವಹಿಸಿ: ಜಿಪಂ ಸಿಇಒ


ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ವಹಿಸಿ: ಜಿಪಂ ಸಿಇಒ


ಹೊಸಪೇಟೆ, 20 ಮಾರ್ಚ್ (ಹಿ.ಸ):

ಆ್ಯಂಕರ್: ಭವ್ಯ ಭಾರತದ ಮುಂದಿನ ಪ್ರಜೆಗಳಾಗುವ ನೀವು ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ವಹಿಸಿ ನಿಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಬಿ. ಸದಾಶಿವ ಪ್ರಭು ಅವರು ಬಾಲಕಿಯರನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅಂತರರಾಷ್ಟ್ರಿಯ ಮಹಿಳಾ ದಿನಾಚರಣೆ ಹಾಗೂ ಜಿಲ್ಲಾ ಸ್ವೀಪ್ ಕಾರ್ಯಕ್ರಮದಡಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ 19 ವರ್ಷದೊಳಗಿನ ಬಾಲಕಿಯರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವತಿಯರು ಕ್ರೀಡೆಗಳ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲೂ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಕ್ರೀಕೆಟ್ ಪಂದ್ಯಾವಳಿಗಳಲ್ಲಿ ಉತ್ತಮ ಪ್ರದರ್ಶನವನ್ನು ಆಟಗಾರ್ತಿಯರು ನೀಡುತ್ತಿದ್ದಾರೆ. ಅವರನ್ನು ಸ್ಪೂರ್ತಿಯಾಗಿ ಪಡೆದು ಪಠ್ಯೇತರ ಚಟುವಟಿಕೆಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ ಎಂದರು.

19 ವರ್ಷದೊಳಗಿನ ಕ್ರಿಕೆಟ್ ಪಂದ್ಯಾವಳಿಗೆ ಹೊಸಪೇಟೆ ಸೇರಿದಂತೆ ವಿವಿಧ ತಾಲ್ಲೂಕಿನ 6 ತಂಡಗಳು ಭಾಗವಹಿಸಿದ್ದವು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಂಜುನಾಥ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಕೆ.ವಿ. ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಹರಿಸಿಂಗ್ ರಾಥೋಡ್ ಇದ್ದರು.


 rajesh pande