ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ
ನವದೆಹಲಿ, 24 ಮಾರ್ಚ್ (ಹಿ.ಸ): ಆ್ಯಂಕರ್: ಮೋದಿ ಉಪ ನಾಮ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾ
ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ


ನವದೆಹಲಿ, 24 ಮಾರ್ಚ್ (ಹಿ.ಸ):

ಆ್ಯಂಕರ್: ಮೋದಿ ಉಪ ನಾಮ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.

ನಿನ್ನೆಯಷ್ಟೇ ಸೂರತ್ ಜಿಲ್ಲಾ ನ್ಯಾಯಾಲಯ ರಾಹುಲ್ ಅವರನ್ನು ಅಪರಾಧಿ ಎಂದು ತೀರ್ಪು ನೀಡಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ, ಲೋಕಸಭಾ ಸಚಿವಾಲಯ ರಾಹುಲ್ ಅವರನ್ಬು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಎರಡು ವರ್ಷ ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿಯವರನ್ನು 1951ರ ಜನಪ್ರತಿನಿಧಿ ಕಾಯ್ದೆ ಅನ್ವಯ ಅನರ್ಹಗೊಂಳಿಸಲಾಗಿದೆ ಎಂದು ಲೋಕಸಭಾ ಸಚಿವಾಲಯ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

ರಾಹುಲ್ ಗಾಂಧಿಯವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಈಗ ಅವರ ಲೋಕಸಭಾ ಸದಸ್ಯತ್ವ ರದ್ದಾಗಿದೆ.

ಕಾಂಗ್ರೆಸ್ ಗುಡುಗು:

ರಾಹುಲ್ ಗಾಂಧಿಯ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವ ಕ್ತಮಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ನಿರ್ಧಾರದ ವಿರುದ್ಧ ಕಾನೂನು ಸಮರ ನಡೆಸುವುದಾಗಿ ಹೇಳಿದೆ.

ಹೋರಾಟವನ್ನು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಎದುರಿಸುತ್ತೇವೆ. ನಾವು ಹೆದರುವುದಿಲ್ಲ ಅಥವಾ ಮೌನವಾಗಿರುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಜೈ ರಾಮ್ ರಮೇಶ್ ಗುಡುಗಿದ್ದಾರೆ

ಪ್ರಧಾನಮಂತ್ರಿ-ಸಂಯೋಜಿತ ಅದಾನಿ ಮಹಾಮೇಗಾ ಹಗರಣದಲ್ಲಿ ಜೆಪಿಸಿ ತನಿಖೆಗೆ ಬದಲಿಗೆ, ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇದು ಭಾರತೀಯ ಪ್ರಜಾಪ್ರಭುತ್ವ ಎಂದು ಟ್ಬೀಟ್ ಮಾಡಿದ್ದಾರೆ.

2019ರ ಕರ್ನಾಟಕ ವಿಧಾನಸಭೆಯ ಚುನಾವಣೆಯ ಸಮಯದಲ್ಲಿ ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವ ಸಮಯದಲ್ಲಿ ರಾಹುಲ್ ಗಾಂಧಿ ಅವರು `ಎಲ್ಲಾ ಕಳ್ಳರಿಗೂ ಮೋದಿ ಎಂಬುದೇ ಸಾಮಾನ್ಯ ಉಪನಾಮವಾಗಿದ್ದು ಹೇಗೆ ಎಂದು ಪ್ರಶ್ನಿಸಿದ್ದರು

ರಾಹುಲ್ ಗಾಂಧಿ ಅವರಿಗೆ 2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯ ಅವರ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದು, ಸಂಸದ ಸ್ಥಾನ ಕಳೆದುಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande