ಇಂದು ಮುಂಬೈ ಇಂಡಿಯನ್ಸ್-ಯುಪಿ ನಡುವೆ ಎಲಿಮಿನೇಟರ್ ಪಂದ್ಯ
ಮುಂಬೈ,24 ಮಾರ್ಚ್ (ಹಿ.ಸ): ಆ್ಯಂಕರ್ :ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ಅಂತಿಮ ಹಂತದತ್ತ ತಲುಪ
ೇೇೇ


ಮುಂಬೈ,24 ಮಾರ್ಚ್ (ಹಿ.ಸ):

ಆ್ಯಂಕರ್

:ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ಅಂತಿಮ ಹಂತದತ್ತ ತಲುಪುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ , ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ರೇಸ್ನಲ್ಲಿದೆ. ಈಗಾಗಲೇ ಆಡಿದ ಎಂಟು ಪಂದ್ಯಗಳ ಪೈಕಿ ಎರಡರಲ್ಲಿ ಸೋಲು ಆರರಲ್ಲಿ ಗೆಲುವು ಸಾಧಿಸಿ ಡೆಲ್ಲಿ ನೇರವಾಗಿ ಫೈನಲ್ ಪ್ರವೇಶಿಸಿದೆ. ಮುಂಬೈ ಹಾಗೂ ಯುಪಿ ನಡುವೆ ಯಾರಿಗೆ ಫೈನಲ್ ಟಿಕೆಟ್ ಎಂಬುದು ಇಂದು ನಿರ್ಧಾರವಾಗಲಿದೆ. ನೇವಿ ಮುಂಬೈನ ಡಾ. ಡಿವೈ ಪಾಟಿಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಇಂದು ಹರ್ಮನ್ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಅಲಿಸ್ಸಾ ಹೀಲಿ ನೇತೃತ್ವದ ಯುಪಿ ವಾರಿಯರ್ಸ್ ನಡುವೆ ಎಲಿಮಿನೇಟರ್ ಪಂದ್ಯ ಆಯೋಜಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande