ಮಮತಾ ಬ್ಯಾನರ್ಜಿ ಭೇಟಿಯಾದ ಹೆಚ್ಡಿ ಕುಮಾರಸ್ವಾಮಿ
ಕೋಲ್ಕತ್ತ, 24 ಮಾರ್ಚ್ (ಹಿ.ಸ): ಆ್ಯಂಕರ್ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಪಶ್ಚಿಮ ಬಂಗಾಳ ಮುಖ್ಯಮಂ
ಮಮತಾ ಬ್ಯಾನರ್ಜಿ ಭೇಟಿಯಾದ ಹೆಚ್ಡಿ ಕುಮಾರಸ್ವಾಮಿ


ಕೋಲ್ಕತ್ತ, 24 ಮಾರ್ಚ್ (ಹಿ.ಸ):

ಆ್ಯಂಕರ್

: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದಲ್ಲಿ ಭೇಟಿಯಾದರು. ಟಿಎಂಸಿ ಮೂಲಗಳ ಪ್ರಕಾರ, ಇಬ್ಬರೂ ನಾಯಕರು ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು 2024 ರ ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢಿ ಬಿಜೆಪಿಯನ್ನು ಎದುರಿಸುವ ತಂತ್ರಗಳ ಬಗ್ಗೆ ಚರ್ಚಿಸಲಾಗಿದೆ. ಕಾಂಗ್ರೆಸ್ ಪಕ್ಷವನ್ನು ಸಹ ಮಣಿಸುವ ಕುರಿತು ಮಾತುಕತೆ ನಡೆಸಲಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪ್ರಾದೇಶಿಕ ಪಕ್ಷಗಳಲ್ಲಿ ಒಮ್ಮತ ರೂಪಿಸುವ ಸಲುವಾಗಿ ಸಭೆ ನಡೆಸಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕಳೆದ ವಾರವಷ್ಟೇ ಮಮತಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಬಿಜೆಪಿ ಹಾಗೂ ಕಾಂಗ್ರೆಸ್ನಿಂದ ಸಮಾನ ಅಂತರವನ್ನು ಕಾಯ್ದುಕೊಳ್ಳುವುದಾಗಿ ಸಮಾಜವಾದಿ ಪಕ್ಷ ಮತ್ತು ಟಿಎಂಸಿ ಹೇಳಿದ್ದವು. ಜತೆಗೆ, ಪ್ರಾದೇಶಿಕ ಪಕ್ಷಗಳ ಒಗ್ಗೂಡುವಿಕೆ ನಿಟ್ಟಿನಲ್ಲಿ ಶ್ರಮಿಸುವುದಾಗಿಯೂ ಹೇಳಿದ್ದವು.

ಹಿಂದೂಸ್ತಾನ್ ಸಮಾಚಾರ್


 rajesh pande