ದಾವಣಗೆರೆ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣ ಬಂದ್
ದಾವಣಗೆರೆ,25 ಮಾರ್ಚ್ (ಹಿ.ಸ): ಆ್ಯಂಕರ್: : ಪ್ರಧಾನಿ ನರೇಂದ್ರ ಮೋದಿಯವರು ಇಂದು (ಮಾ.25) ರಾಜ್ಯದ ಬೆಣ್ಣೆ ನಗರಿ ದಾವ
್್್


ದಾವಣಗೆರೆ,25 ಮಾರ್ಚ್ (ಹಿ.ಸ):

ಆ್ಯಂಕರ್:

: ಪ್ರಧಾನಿ ನರೇಂದ್ರ ಮೋದಿಯವರು ಇಂದು (ಮಾ.25) ರಾಜ್ಯದ ಬೆಣ್ಣೆ ನಗರಿ ದಾವಣಗೆರೆಗೆ ಭೇಟಿ ನೀಡಲಿದ್ದು, ನಗರದ ಹೊರ ವಲಯದ ಜಿಎಂಐಟಿ ಕಾಲೇಜ್ ಪಕ್ಕದಲ್ಲಿ ನಡೆಯುವ ಮೋದಿ ಮಹಾಸಂಗಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ದಾವಣಗೆರೆ ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಇಂದು ದಾವಣಗೆರೆಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಖಾಸಗಿ ಬಸ್ ನಿಲ್ದಾಣಗಳನ್ನು ಬಂದ್ ಮಾಡಲಾಗಿದ್ದು, ಒಂದು ದಿನದ ಮಟ್ಟಿಗೆ ನಗರದ ಹೊರವಲಯಕ್ಕೆ ಸ್ಥಳಾಂತರ ಮಾಡಲಾಗಿದೆ.

ಪ್ರಧಾನಿ ಮೋದಿ ದಾವಣಗೆರೆ ಭೇಟಿ ಸಮಯ

ಪ್ರಧಾನಿ ಮೋದಿ ಮಧ್ಯಾಹ್ನ 3.15ಕ್ಕೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್ಗೆ ಆಗಮಿಸಿ, ಮಧ್ಯಾಹ್ನ 3.20ಕ್ಕೆ ಹೆಲಿಪ್ಯಾಡ್ನಿಂದ ಜಿ ಎಂ ಐ ಟಿ ವೇದಿಕೆಗೆ ಬರಲಿದ್ದಾರೆ. ಸಂಜೆ 5.05ಕ್ಕೆ ಸಾರ್ವಜನಿಕ ಸಭೆ ವೇದಿಕೆಯಿಂದ ನಿರ್ಗಮಿಸಲಿದ್ದು, ಸಂಜೆ 5.15ಕ್ಕೆ ದಾವಣಗೆರೆಯಿಂದ ಹೆಲಿಕಾಪ್ಟರ್ನಲ್ಲಿ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುತ್ತಾರೆ. ಸಂಜೆ 5.50ಕ್ಕೆ ಶಿವಮೊಗ್ಗ ಏರ್ಪೋರ್ಟ್ ತಲುಪುವ ಪ್ರಧಾನಿ ಮೋದಿ, ಸಂಜೆ 5.55ಕ್ಕೆ ಶಿವಮೊಗ್ಗ ಏರ್ಪೋರ್ಟ್ನಿಂದ ದೆಹಲಿಗೆ ತೆರಳಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande