ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ನವದೆಹಲಿ,25ಮಾರ್ಚ್ (ಹಿ.ಸ): ಆ್ಯಂಕರ್ : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ
ುೀುೀ


ನವದೆಹಲಿ,25ಮಾರ್ಚ್ (ಹಿ.ಸ):

ಆ್ಯಂಕರ್ :

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದೆ.

2023 ರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಕಾಂಗ್ರೆಸ್‌ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ 3 - 4 ದಿನಗಳಿಂದ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದ್ದು, ಈವರೆಗೆ ಪಟ್ಟಿ ಬಿಡುಗಡೆಯಾಗಿರಲಿಲ್ಲ. ಆದರೆ, ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುವ ದಿನವೇ ಕಾಂಗ್ರೆಸ್‌ 124 ವಿಧಾನಸಭಾ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪ್ರಮುಖವಾಗಿ, ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬುದು ಕುತೂಹಲ ಮೂಡಿಸಿತ್ತು. ಈಗ ಸಿದ್ದರಾಮಯ್ಯ ವರುಣಾದಿಂದಲೇ ಸ್ಪರ್ಧಿಸುವುದು ಸ್ಪಷ್ಟವಾಗಿದೆ. ಅಲ್ಲದೆ, ಮೊದಲ ಪಟ್ಟಿಯಲ್ಲಿ ಕೋಲಾರ ಹಾಗೂ ಬಾದಾಮಿ ಕ್ಷೇತ್ರದ ಅಭ್ಯರ್ಥಿ ಹೆಸರಿಲ್ಲ. ಸಿದ್ದರಾಮಯ್ಯ 2 ಕ್ಷೇತ್ರ ಸ್ಪರ್ಧೆ ಸುಳಿವು ಬೆನ್ನಲ್ಲೇ ಮೊದಲ ಪಟ್ಟಿಯಲ್ಲಿ ಕೋಲಾರ, ಬಾದಾಮಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿಲ್ಲ.

ಅಲ್ಲದೆ, ಕನಕಪುರದಲ್ಲಿ ಡಿ.ಕೆ. ಶಿವಕುಮಾರ್‌ಗೆ ಟಿಕೆಟ್‌ ಘೋಷಿಸಲಾಗಿದ್ದು, ದರ್ಶನ್‌ ಧ್ರುವನಾರಾಯಣಗೆ ನಂಜನಗೂಡು ಕ್ಷೇತ್ರದ ಟಿಕೆಟ್‌ ಘೋಷಿಸಲಾಗಿದೆ.
https://kannada.hindusthansamachar.in/Encyc/2023/3/25/ases-Candidates-List-Ahead-of-Karnataka-Assemb.php

ಹಿಂದೂಸ್ತಾನ್ ಸಮಾಚಾರ್


 rajesh pande