ಇಂದಿನಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್
ಲಂಡನ್, 7ಜೂನ್ (ಹಿ.ಸ): ಆ್ಯಂಕರ್:ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಹುನಿರೀಕ್ಷಿತ ಎರಡನೇ ಆವೃತ್ತಿಯ ಐಸಿಸಿ ಟೆಸ್
ೀೀ


ಲಂಡನ್, 7ಜೂನ್ (ಹಿ.ಸ):

ಆ್ಯಂಕರ್:ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಹುನಿರೀಕ್ಷಿತ ಎರಡನೇ ಆವೃತ್ತಿಯ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೂನ್ 7 ಇಂದು ಡಬ್ಲ್ಯೂಟಿಸಿ 2023 ಫೈನಲ್ಗೆ ಚಾಲನೆ ಸಿಗಲಿದೆ. ಈಗಾಗಲೇ ಉಭಯ ತಂಡಗಳು ಲಂಡನ್ನ ಪ್ರತಿಷ್ಠಿತ ಕೆನ್ನಿಂಗ್ಟನ್ ಓವಲ್ ಮೈದಾನಕ್ಕೆ ತಲುಪಿದ್ದು ಅಭ್ಯಾಸದಲ್ಲಿ ನಿರತರಾಗಿದ್ದಾರೆ. 2021ರ ಜೂನ್ನಲ್ಲಿ ನಡೆದ ಮೊದಲ ಆವೃತ್ತಿಯ ಫೈನಲ್ನಲ್ಲಿ ನ್ಯೂಜಿಲೆಂಡ್ ಎದುರು ಭಾರತ 8 ವಿಕೆಟ್ಗಳಿಂದ ಸೋಲುಂಡಿತ್ತು. ಇದೀಗ ಸತತ ಎರಡನೇ ಬಾರಿ ಫೈನಲ್ ತಲುಪಿರುವ ಟೀಮ್ ಇಂಡಿಯಾ ಚೊಚ್ಚಲ ಟ್ರೋಫಿ ಗೆಲ್ಲುವತ್ತ ಚಿತ್ತ ನೆಟ್ಟಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande