ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ
ಬಳ್ಳಾರಿ, 8 ಜೂನ್ (ಹಿ.ಸ): ಆ್ಯಂಕರ್: ಜೂನ್ 09 ರಿಂದ 11 ರವರೆಗೆ ಕರ್ನಾಟಕ ಲೋಕ ಸೇವಾ ಆಯೋಗದಿಂದ 2021 ನೇ ಸಾಲಿನ
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ನಿಷೇಧಾಜ್ಞೆ ಜಾರಿ: ಡಿಸಿ ಮಾಲಪಾಟಿ


ಬಳ್ಳಾರಿ, 8 ಜೂನ್ (ಹಿ.ಸ):

ಆ್ಯಂಕರ್: ಜೂನ್ 09 ರಿಂದ 11 ರವರೆಗೆ ಕರ್ನಾಟಕ ಲೋಕ ಸೇವಾ ಆಯೋಗದಿಂದ 2021 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.

ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ಹಾಗೂ ಮಧ್ಯಾಹ್ನ 02 ರಿಂದ ಸಂಜೆ 04 ರವರೆಗೆ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳು ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜಿನ (ಪ್ರೌಢ ಶಾಲಾ ವಿಭಾಗ)ದಲ್ಲಿ ನಡೆಸಲಾಗುತ್ತಿದ್ದು, ಈ ಪರೀಕ್ಷೆಯು ಸುಸೂತ್ರವಾಗಿ ನಡೆಸುವ ಹಿತದೃಷ್ಟಿಯಿಂದ, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರದ ಸುತ್ತಲೂ ಇರುವ ಜೆರಾಕ್ಸ್ ಕೇಂದ್ರಗಳನ್ನು ಬೆಳ್ಳಗ್ಗೆ 09 ರಿಂದ ಸಂಜೆ 05 ರವರೆಗೆ ಮುಚ್ಚಲು ಷರತ್ತಿಗೊಳಪಟ್ಟು ಆದೇಶಿಸಿದೆ ಹಾಗೂ ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಹಾಗೂ ವ್ಯಕ್ತಿಗಳ ಗುಂಪುಗಳನ್ನು ಪ್ರವೇಶ ನಿಷೇಧಿಸಲಾಗಿದೆ.

ಈ ಆದೇಶವು ಪರೀಕ್ಷಾ ಕಾರ್ಯದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.


 rajesh pande