ಮಣಿಪುರದಲ್ಲಿ ಪರಿಸ್ಥಿತಿ ಶಾಂತಿಯುತ, ನಿಯಂತ್ರಣ
ಇಂಪಾಲ್, 9ಜೂನ್ (ಹಿ.ಸ): ಆ್ಯಂಕರ್: ಮಣಿಪುರದಲ್ಲಿ ಕಳೆದ ೪೮ ಗಂಟೆಗಳಲ್ಲಿ ಯಾವುದೇ ಹಿಂಸಾಚಾರದ ಘಟನೆ ವರದಿಯಾಗಿಲ್
ಮಣಿಪುರದಲ್ಲಿ ಪರಿಸ್ಥಿತಿ ಶಾಂತಿಯುತ, ನಿಯಂತ್ರಣ


ಇಂಪಾಲ್, 9ಜೂನ್ (ಹಿ.ಸ):

ಆ್ಯಂಕರ್:

ಮಣಿಪುರದಲ್ಲಿ ಕಳೆದ ೪೮ ಗಂಟೆಗಳಲ್ಲಿ ಯಾವುದೇ ಹಿಂಸಾಚಾರದ ಘಟನೆ ವರದಿಯಾಗಿಲ್ಲ ಮತ್ತು ಪರಿಸ್ಥಿತಿ ಶಾಂತಿಯುತ ಮತ್ತು ನಿಯಂತ್ರಣದಲ್ಲಿದೆ.

ಐದು ಕಣಿವೆ ಜಿಲ್ಲೆಗಳಲ್ಲಿ ೧೨ ಗಂಟೆಗಳ ಕಾಲ ಮತ್ತು ನೆರೆಯ ಗುಡ್ಡಗಾಡು ಜಿಲ್ಲೆಗಳಲ್ಲಿ ಹತ್ತು ಗಂಟೆಗಳ ಕಾಲ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ. ಇತರ ಆರು ಗುಡ್ಡಗಾಡು ಜಿಲ್ಲೆಗಳಲ್ಲಿ ಕರ್ಫ್ಯೂ ತೆರವುಗೊಳಿಸಲಾಗಿದೆ ಎಂದು ಮಣಿಪುರ ಸರ್ಕಾರದ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಹೇಳಿದ್ದಾರೆ.

ಮಣಿಪುರದಲ್ಲಿ ಸ್ಥಳಾಂತರಗೊಂಡ ಜನರಿಗೆ ಪರಿಹಾರ ನೀಡುವ ಸಲುವಾಗಿ, ಗೃಹ ಸಚಿವಾಲಯವು ೧೦೧ ಕೋಟಿ ರೂಯಿಪಿಗಳ ಪರಿಹಾರ ಪ್ಯಾಕೇಜ್ ಅನ್ನು ಅನುಮೋದಿಸಿದೆ. ಎಲ್ಲಾ ದುರ್ಬಲ ಪ್ರದೇಶಗಳಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande