
ಚನೈ, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಖ್ಯಾತ ಚಿತ್ರನಟ ರಜನಿಕಾಂತ್ ಆರೋಗ್ಯದಲ್ಲಿ ಹಠಾತ್ ಏರುಪೇರಾದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋಮವಾರ ರಾತ್ರಿ ದಿಢೀರ್ ಹೊಟ್ಟೆನೋವು ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
೭೩ ವರ್ಷದ ರಜನಿಕಾಂತ್ ಆರೋಗ್ಯ ಈಗ ಸ್ಥಿರವಾಗಿದ್ದು ಕೆಲವು ವೈದ್ಯಕೀಯ ಪರೀಕ್ಷೆಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಅವರ ಪತ್ನಿ ಲತಾ ಮಾಹಿತಿ ನೀಡಿದ್ದಾರೆ.
ರಜನಿಕಾಂತ್ ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿದು ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರಜನಿಕಾಂತ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa