ಹೈದರಾಬಾದ್, 01 ಅಕ್ಟೋಬರ್(ಹಿ.ಸ.) :
ಆ್ಯಂಕರ್ : ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಪುತ್ರಿ ಹಾಗೂ ಹಿರಿಯ ಬಿಆರ್ ಎಸ್ ನಾಯಕಿ ಕೆ.ಕವಿತಾ ಅವರಿಗೆ ಅನಾರೋಗ್ಯ ಕಾಡಿದ್ದು, ಹೈದರಾಬಾದ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರೋಗ್ಯದ ಕುರಿತು ವರದಿ ಬಂದ ಬಳಿಕ ಆಸ್ಪತ್ರೆಯಲ್ಲೇ ಸ್ವಲ್ಪ ದಿನ ಇರಬೇಕೇ ಅಥವಾ ಮನೆಗೆ ಕಳುಹಿಸಬೇಕೆ ಎನ್ನುವ ಕುರಿತು ವೈದ್ಯರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ಕವಿತಾ ದೆಹಲಿ ಮದ್ಯ ನೀತಿಯ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದಾಗ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.
ಕೆ ಕವಿತಾ ಅವರನ್ನು ಮಾರ್ಚ್ 15, 2024 ರಂದು ಇಡಿ ಮತ್ತು ಏಪ್ರಿಲ್ 11, 2024 ರಂದು ಸಿಬಿಐ ಬಂಧಿಸಿತ್ತು. ಇತ್ತೀಚೆಗೆ, ಜಾರಿ ನಿರ್ದೇಶನಾಲಯ ಅಬಕಾರಿ ನೀತಿ ಹಣ ವರ್ಗಾವಣೆ ಪ್ರಕರಣದಲ್ಲಿ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿತ್ತು, ಬಿಆರ್‌ಎಸ್ ನಾಯಕಿ ಕೆ ಕವಿತಾ ಮತ್ತು ಇತರ ಆರೋಪಿಗಳಾದ ಚನ್‌ಪ್ರೀತ್ ಸಿಂಗ್, ದಾಮೋದರ್, ಪ್ರಿನ್ಸ್ ಸಿಂಗ್ ಮತ್ತು ಅರವಿಂದ್ ಕುಮಾರ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ.ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್