ಹೊಸಪೇಟೆ, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹಿರಿಯ ನಾಗರಿಕರು ಅಪಾರ ಅನುಭವ ಹೊಂದಿದ ಜ್ಞಾನ ಭಂಡಾರವಿದ್ದಂತೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮಾನ ಎ.ನಂದಗಡಿ ಅವರು ಹೇಳಿದ್ದಾರೆ.
ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹೊಸಪೇಟೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೆÇಲೀಸ್ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹೊಸಪೇಟೆಯ ನಗರಸಭೆಯಲ್ಲಿ ನಡೆದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಭಾರತ ದೇಶವು ಸಂಸ್ಕøತಿಯ ತವರೂರು. ಭಾರತದ ನಾಗರಿಕರು ಹಿರಿಯರಿಗೆ ದೇವರ ಸ್ಥಾನವನ್ನು ನೀಡಿ ಗೌರವಿಸುತ್ತಾರೆ. ಹಿರಿಯ ನಾಗರಿಕರು ತಮ್ಮ ಅನುಭವಗಳನ್ನು ಯುವ ಜನತೆಗೆ ಧಾರೆ ಎರೆದು, ಯುವ ಜನೆತೆಯ ಯಶಸ್ಸಿಗೆ ಪಾತ್ರರಾಗುತ್ತಿದ್ದಾರೆ. ಈಗಿನ ದಿನಗಳಲ್ಲಿ ಯುವಕರಿಗೆ ಉತ್ಸಾಹ ಕಡಿಮೆಯಾಗುತ್ತಿದೆ. ಹಿರಿಯರು ಪಾಲಿಸುತ್ತಿದ್ದ ಜೀವನ ಶೈಲಿಯನ್ನು ಯುವಕರು ಅಳವಡಿಸಿಕೊಂಡರೆ ಯಶಸ್ಸು ಖಂಡಿತ. ಜೀವನದಲ್ಲಿ ಏನಾದರು ಸಾಧನೆ ಮಾಡಬೇಕಾದರೆ ಮನೆಯ ಹಿರಿಯರ ಆಶೀರ್ವಾದವಿರಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ನರಸಭೆಯ ಪೌರಾಯುಕ್ತರಾದ ಚಂದ್ರಪ್ಪ ಸಿ. ಅವರು ಮಾತನಾಡಿ, ಹಿರಿಯ ನಾಗರಿಕರು ತಮ್ಮ ಜೀವನದಲ್ಲಿ ಎಲ್ಲ ರೀತಿಯ ನೋವು ನಲಿವನ್ನು ಅನುಭವಿಸಿ ತಮ್ಮ ಜೀವನದ ಹಾದಿಯನ್ನು ಸವಿಸಿರುತ್ತಾರೆ. ಅವರು ತಮ್ಮ ಜೀವದಲ್ಲಿ ಮಾಡಿದ ಸಾಧನೆ, ಜೀವನದ ಹಾದಿ ಹೇಗಿರುತ್ತದೆ ಎಂಬುದರ ಬಗ್ಗೆ ಯುವ ಜನತೆಗೆ, ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ವಯಸ್ಸಾಗುತ್ತಿದಂತೆ ವಯೋ ಸಹಜ ಕಾಯಿಲೆಗಳು ಹಿರಿಯರನ್ನು ಮಾನಸಿಕವಾಗಿ ಖಿನ್ನತೆಗೆ ಒಳಗಾಗುವಂತೆ ಮಾಡುತ್ತವೆ. ಮಕ್ಕಳು ಅವರ ಮನಸ್ಥಿತಿಯನ್ನು ಅರಿತು ಸರಿಯಾದ ಚಿಕಿತ್ಸೆ ಕೊಡಿಸುವುದು ಮಕ್ಕಳ ಜವಾಬ್ದಾರಿ ಎಂದು ಹೇಳಿದರು.
ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಪ್ರಶಾಂತ್ ನಾಗಲಾಪುರ್ ಅವರು ಮಾತನಾಡಿ, ಭಾರತ ಸರ್ಕಾರವು 2007ರಲ್ಲಿ ತಂದೆ ತಾಯಿಯರ ಹಾಗೂ ಹಿರಿಯರ ಪಾಲನೆ, ಪೋಷಣೆ ಮತ್ತು ಕಲ್ಯಾಣ ಅಧಿನಿಯಮ 2007ರ ಕಾಯ್ದೆಯನ್ನು ಜಾರಿ ಮಾಡಿತು. ಮಕ್ಕಳು ತಂದೆ ತಾಯಿಯರ ಹಾಗೂ ಹಿರಿಯರ ಪಾಲನೆ, ಪೋಷಣೆ ಮತ್ತು ಕಲ್ಯಾಣ ಅಂದರೆ ಅವರಿಗೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ವಿಫಲವಾದರೆ ಈ ಅಧಿನಿಯದಡಿ ದೂರು ದಾಖಲಿಸಬಹುದು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೊಸಪೇಟೆ ತಾಲೂಕಿನ ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಲತಾ ಬಿ ಹುಲ್ಲೂರ, ಗೌರವಾನ್ವಿತ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಮೇಶ್ ಬಾಬು ಬಿ.ಎನ್., ಅಪರ ಸಿವಿಲ್ ನ್ಯಾಯಾಧೀಶರಾದ ಅಶೋಕ ಆರ್.ಹೆಚ್., ಗೌರವಾನ್ವಿತ 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಂಜಿವ್ ಕುಮಾರ ಜಿ., ಗೌರವಾನ್ವಿತ 3ನೇ ಅಪರ ಸಿವಿಲ್ ನ್ಯಾಯಾಧೀಶರಾದ ಚೈತ್ರ ಜೆ., ವಕೀಲರ ಸಂಘದ ಅಧ್ಯಕ್ಷರಾದ ಕೆ.ಪ್ರಹ್ಲಾದ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಪಿ.ಶ್ರೀನಿವಾಸಮೂರ್ತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕರಿಯಾದ ಡಾ.ದೊಡ್ಡಮನಿ ಎಂ.ಪಿ, ತಾಲೂಕು ಆರೋಗ್ಯಾಧಿಕಾರಿ ಡಾ.ಬಾಸ್ಕರ್, ವಕೀಲರು ಹಾಗೂ ನಗರಸಭೆಯ ಮಾಜಿ ಉಪಾಧ್ಯಕ್ಷರಾದ ಎಲ್.ಎಸ್.ಆನಂದ, ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಎಂ.ರಾಮಪ್ಪ, ನಿವೃತ್ತ ನೌಕರರ ಸಂಘದ ತಾಲೂಕಾಧ್ಯಕ್ಷರಾದ ರಾಜಶೇಖರ ಪಾಟೀಲ್, ಪಟ್ಟಣ ಪೆÇಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಲಕನ್ ಆರ್.ಮಸುಗುಪ್ಪಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್