ಇಟಾ ನಗರ, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅರುಣಾಚಲ ಪ್ರದೇಶದ ಇಟಾ ನಗರದಲ್ಲಿ ಕೇಂದ್ರ ಸರ್ಕಾರದ ನಾನಾ ಯೋಜನೆಗಳ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಮಂಜೂರಾತಿ ಪತ್ರ ವಿತರಿಸಿದರು.
ಪ್ರಧಾನ ಮಂತ್ರಿ ಸ್ವನಿಧಿ, ಸ್ಟ್ಯಾಂಡ್ ಅಪ್ ಇಂಡಿಯಾ, ಕಿಸಾನ್ ಕ್ರೆಡಿಟ್ ಕಾರ್ಡ್, ಪಿಎಂ ಮುದ್ರಾ, ಪಿಎಂ ಸೂರ್ಯಘರ್, ಪಿಎಂ ಇಜಿಪಿ ಸೇರಿದಂತೆ ಹಲವು ಯೋಜನೆಗಳ ೧೬೦ ಫಲಾನುಭವಿಗಳಿಗೆ ೧೪ ಕೋಟಿ ೪೧ ಲಕ್ಷ ಸಾಲ ವಿತರಣಾ ಪತ್ರಗಳನ್ನು ಹಸ್ತಾಂತರಿಸಿದರು.
ಅನಂತರ ಮಾತನಾಡಿದ ನಿರ್ಮಲಾ ಸೀತಾರಾಮನ್, ೨೦೧೪ಕ್ಕೂ ಮುನ್ನ ಬಹುತೇಕ ಬಡ ಹಾಗೂ ಮಧ್ಯಮ ವರ್ಗದವರು ಬ್ಯಾಂಕ್ ಖಾತೆ ಹೊಂದಿರಲಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಂದು ಕುಟುಂಬದವರಿಗೂ ಬ್ಯಾಂಕ್ ಖಾತೆಗಳನ್ನು ತೆರೆಯಲು ಅವಕಾಶ ನೀಡಿದ್ದಾರೆ. ಸ್ವನಿಧಿ, ಮುದ್ರಾ ಸೇರಿದಂತೆ ಹಲವು ಯೋಜನೆಗಳ ಮೂಲಕ ಜನಸಾಮಾನ್ಯರಿಗೆ ಸುಲಭ ಸಾಲ ಸಿಗುವಂತೆ ಮಾಡಿದ್ದಾರೆ ಎಂದರು.
ಮುದ್ರಾ, ಸ್ವನಿಧಿ ಸೇರಿದಂತೆ ಹಲವು ಯೋಜನೆಗಳಡಿ ಯಾವುದೇ ಭದ್ರತೆ ಇಲ್ಲದೆ ಸಾಲವನ್ನು ಒದಗಿಸಲಾಗುತ್ತಿದೆ. ವಿಶೇಷವಾಗಿ ಮಹಿಳೆಯರು, ಯುವ ಜನತೆ, ಹಿಂದುಳಿದ ವರ್ಗದವರಿಗೆ ಸಾಲಸೌಲಭ್ಯ ಕಲ್ಪಿಸಲಾಗುತ್ತಿದೆ. ಈ ಮೂಲಕ ಜನರು ಆರ್ಥಿಕವಾಗಿ ಸಶಕ್ತರಾಗುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್