ಬೆಂಗಳೂರು, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಕುಟುಂಬಕ್ಕೆ ಹಂಚಿಕೆಯಾದ ಮುಡಾ ನಿವೇಶನ ವಾಪಸ್ ಕೊಡುವ ನಿರ್ಣಯ ಮಾಡಿದ್ದಾರೆ ಎಂದರೆ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದೇ ಅರ್ಥ. ಸಿದ್ದರಾಮಯ್ಯ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು, ಅದಕ್ಕೂ ಮುನ್ನ ರಾಜ್ಯಪಾಲರ ಬಳಿ ಕ್ಷಮಾಪಣೆ ಕೋರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಜಯೇಂದ್ರ, 2011ರಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಆರೋಪ ಬಂದಾಗ, ಪ್ರತಿಪಕ್ಷ ಸ್ಥಾನದಲ್ಲಿ ಸಿದ್ದರಾಮಯ್ಯ ಮಾತಾಡಿದ್ದ ವಿಡಿಯೋ ಪ್ರದರ್ಶಿಸಿ ತಿರುಗೇಟು ನೀಡಿದರು.
ಮುಖ್ಯಮಂತ್ರಿ ಮತ್ತು ರಾಜ್ಯದಲ್ಲಿ ಆಗುತ್ತಿರುವ ಭ್ರಷ್ಟಾಚಾರಗಳ ವಿರುದ್ಧ ಅನೇಕ ಹೋರಾಟ ಕೈಗೆತ್ತಿಕೊಂಡಿದ್ದೆವು. ಮುಡಾ, ವಾಲ್ಮೀಕಿ ಹಗರಣ, ಎಸ್ಸಿಪಿ ಟಿಎಸ್ಪಿ ಹಣ ದುರುಪಯೋಗದ ಬಗ್ಗೆ ಹೋರಾಟ ಮಾಡಿದ್ದೆವು. ಮುಖ್ಯಮಂತ್ರಿಗಳು ನಮ್ಮ ಹೋರಾಟಕ್ಕೆ ಕಿಂಚಿತ್ತೂ ಬೆಲೆ ಕೊಡದೇ, ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ಬಡಾಯಿ ಹೊಡೆಯುತ್ತಿದ್ದರು. ಭ್ರಷ್ಟಾಚಾರ ರಹಿತ ಆಡಳಿತ ಎಂದು ಹೇಳಿಕೊಂಡೇ 187 ಕೋಟಿ ವಾಲ್ಮೀಕಿ ಹಗರಣ ಹಾಗೂ ಮೈಸೂರಿನ ಮುಡಾ ಹಗರಣ ನಡೆಸಿದ್ದಾರೆ. ಮುಖ್ಯಮಂತ್ರಿ ಧರ್ಮ ಪತ್ನಿಗೆ ಅಕ್ರಮವಾಗಿ ಬಂದಿರುವ ಸೈಟುಗಳು ಒಂದು ಕಡೆ, ಮತ್ತೊಂದೆಡೆ ಅವರಿಗೆ ಬೇಕಾದವರಿಗೆ ಕೊಟ್ಟಿದ್ದಾರೆ. ಮೊದಲ ಹಂತದಲ್ಲಿ ನಾವು ಮೈಸೂರು ಚಲೋ ಮಾಡಿದ್ದೆವು. ಇದರ ಪರಿಣಾಮ ಸಾಮಾಜಿಕ ಹೋರಾಟಗಾರರು ದೂರು ಕೊಟ್ಟರು ಎಂದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್