ನವದೆಹಲಿ, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕಾಶ್ಮೀರದಲ್ಲಿ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಹಂತದ ವಿಧಾನಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು ಮತ್ತು ನಿಮ್ಮಿಂದ ರಾಜತ್ವ ಕಿತ್ತುಕೊಂಡವರಿಗೆ ಪಾಠ ಕಲಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.
ಸಮಾಜಿಕ ಜಾಲತಾಣದ ಎಕ್ಸ್ ಪೋಸ್ಟ್‌ನಲ್ಲಿ ಖರ್ಗೆ ಅವರು, ಜಮ್ಮು ಮತ್ತು ಕಾಶ್ಮೀರಚುನಾವಣೆಯ ಮೂರನೇ ಹಂತದ ಮತದಾನ ಪ್ರಾರಂಭವಾಗುತ್ತಿದ್ದಂತೆ, ಈ 40 ವಿಧಾನಸಭೆ ಸ್ಥಾನಗಳಲ್ಲಿ ಜನರು ತಮ್ಮ ಪ್ರಜಾಸತ್ತಾತಕ ಹಕ್ಕುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಚಲಾಯಿಸಲು ನಾನು ಒತ್ತಾಯಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಜನರಿಂದ ರಾಜ್ಯತ್ವವನ್ನು ಕಿತ್ತುಕೊಂಡವರಿಗೆ ಪಾಠ ಕಲಿಸಲು ಇದು ಅಂತಿಮ ಅವಕಾಶವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.ಒಂದೇ ಒಂದು ಮತವು ನಿಮ್ಮ ಭವಿಷ್ಯವನ್ನು ಬದಲಾಯಿಸಬಹುದು ಮತ್ತು ಉಜ್ವಲ ಭವಿಷ್ಯಕ್ಕೆ ನಾಂದಿ ಹಾಡಬಹುದು ಎಂಬುದನ್ನು ನೆನಪಿಡಿ, ಅದು ನಿಮ್ಮ ಸಾಂವಿಧಾನಿಕ ಹಕ್ಕುಗಳನ್ನು ಭದ್ರಪಡಿಸುತ್ತದೆ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್