ಮೈಸೂರು, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ನೀಡಿರುವ 14 ನಿವೇಶಗಳನ್ನು ಹಿಂತಿರುಗಿಸುವ ಕುರಿತ ಪತ್ರವನ್ನು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮುಡಾ ಕಚೇರಿಗೆ ಬಂದು ಕೊಟ್ಟು ಹೋಗಿದ್ದಾರೆ. ಈ ಕುರಿತು ಒಂದೆರಡು ದಿನಗಳಲ್ಲಿ ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಘುನಂದನ್ ಮಾಹಿತಿ ನೀಡಿದರು.
ಇಂದು ಕಚೇರಿಯ ಬಳಿ ಮುಡಾ ಆಯುಕ್ತ ರಘುನಂದನ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಕಾಯ್ದೆ ಪ್ರಕಾರ ಒಮ್ಮೆ ಒಬ್ಬರಿಗೆ ಖಾತೆ ಮಾಡಿಕೊಟ್ಟರೆ ಅವರೇ ಅದರ ಮಾಲೀಕರು ಆಗುತ್ತಾರೆ. ಆದ್ದರಿಂದ ವಾಪಸ್ ಪಡೆಯಲು ಅವಕಾಶ ಇದೆಯೇ ಎಂಬುದನ್ನು ಕಾನೂನು ತಂಡದ ಜೊತೆ ಚರ್ಚಿಸುತ್ತೇವೆ. ಅದರಂತೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್