ಕೋಲಾರ ,11 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಕಾಂಗ್ರೆಸ್ ಲಕ್ಷ್ಮೀನಾರಾಯಣ ಅವರಿಗೆ ಪಕ್ಷದ ಸಿದ್ಧಾಂತಗಳ ಬಗ್ಗೆ ಅರಿವಿಲ್ಲ. ಕೋಲಾರದಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶಗಳಿಗೆ ಅಧ್ಯಕ್ಷರು ಪಾನಮತ್ತರಾಗಿ ಬರುತ್ತಾರೆ ಯಾರ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲು ಅವರಿಗೆ ಅಧಿಕಾರವಿಲ್ಲ ಎಂದು ಕಾಂಗ್ರೆಸ್ ಮುಖಂಡ ನುಕ್ಕನಹಳ್ಳಿ ಶ್ರೀನಿವಾಸ್ ಆರೋಪಿಸಿದ್ದಾರೆ.
ಕೋಲಾರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದ ಮುಖಂಡರನ್ನು ಅಮಾನತ್ತು ಮಾಡಲು ಅವರಿಗೆ ಯಾವುದೇ ಅಧಿಕಾರವಿಲ್ಲ. ಅವರು ಅಮಾನತ್ತು ಮಾಡಿರುವ ಆದೇಶಕ್ಕೆ ಯಾವುದೇ ಬೆಲೆ ಇಲ್ಲ. ಯಾರಾದರೂ ಅಶಿಸ್ತಿನಿಂದ ವರ್ತಿಸಿದರೆ ಅವರ ವಿರುದ್ಧ ಕೆಪಿಸಿಸಿಗೆ ವರದಿ ಸಲ್ಲಿಸಬೇಕು. ಕೆಪಿಸಿಸಿ ಶಿಸ್ತು ಸಮಿತಿ ಕ್ರಮ ಕೈಗೊಳ್ಳುತ್ತದೆ ಎಂದು ಕಾಂಗ್ರೆಸ್ ಸಭೆಯಲ್ಲಿ ದಾಂಧಲೆ ನಡೆಸಿದವರನ್ನು ಸಮರ್ಥಿಸಿ ಕೊಂಡರು.
ಲಕ್ಷ್ಮೀನಾರಾಯಣ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಸದಸ್ಯರನ್ನು ಪ್ರತಿನಿಧಿಸುತ್ತಿಲ್ಲ. ಬದಲಾಗಿ ಒಂದು ಗುಂಪನ್ನು ಓಲೈಕೆ ಮಾಡುತ್ತಿದ್ದಾರೆ. ಅವರು ಜಿಲ್ಲಾ ಅಧ್ಯಕ್ಷರ ಸ್ಥಾನಕ್ಕೆ ಅರ್ಹವ್ಯಕ್ತಿಯಲ್ಲ. ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದರು ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಪೋಸ್ಟ್‌ಗಳನ್ನು ಹಾಕಿ ಕೋಲಾರದಲ್ಲಿ ಸ್ಪರ್ಧಿಸದಂತೆ ವಾಪಸ್ ಕಳುಹಿಸಿದರು ಎಂದು ಆರೋಪಿಸಿದರು.
ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಮುಂದಿನ ಒಂದು ತಿಂಗಳ ಒಳಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆ ಆಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಬೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಶ್ರೀನಿವಾಸ್ ತಿಳಿಸಿದರು.
ಚಿತ್ರ - ಕೋಲಾರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ನುಕ್ಕನಹಳ್ಳಿ ಶ್ರೀನಿವಾಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ರಾಜಿನಾಮೆಗೆ ಒತ್ತಾಯಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್