ನವದೆಹಲಿ, 11 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ’ಹೆಣ್ಣು ಮಕ್ಕಳ ಸಶಕ್ತೀಕರಣ’ ಧ್ಯೇಯದೊಂದಿಗೆ, ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ.
ಹೆಣ್ಣು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ, ವರ್ಷವಿಡಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ
ಹೆಣ್ಣು ಮಗುವಿಗೆ ಅವಕಾಶಗಳು ಮತ್ತು ಸಂಕಷ್ಟದ ಸಮಯದಲ್ಲಿ ಸಾಂತ್ವನ ಹಾಗೂ ಸಹೃದಯತೆ ಸಾರ್ವಜನಿಕರು ತೋರಬೇಕು ಎಂಬ ಚಿಂತನೆಯೊಂದಿಗೆ, ಹೆಣ್ಣು ಮಗುವಿನ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ.
ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಅವಕಾಶಗಳನ್ನು ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಸಮಾಜದಲ್ಲಿ ಅನುಭವಿಸುವ ತೊಂದರೆಗಳ ಬಗ್ಗೆ ಅರಿವು ಮೂಡಿಸುವುದು. ಸ್ತ್ರೀಯರ ಶಿಕ್ಷಣದ ಮಹತ್ವ, ಮಹಿಳೆಯರ ಆರೋಗ್ಯ ಮತ್ತು ಪೋಷಣೆಯ ಪ್ರಾಮುಖ್ಯತೆಯನ್ನು ಉತ್ತೇಜಿಸುವುದು ಈ ದಿನ ಆಚರಣೆಯ ಮೂಲ ಉದ್ದೇಶವಾಗಿದೆ.
ಬೇಟಿ ಬಚಾವೋ, ಬೇಟಿ ಪಢಾವೋ, ಉಡಾನ್ ಮತ್ತು ಸುಕನ್ಯಾ ಸಮೃದ್ಧಿ ಯೋಜನೆಗಳಂತಹ ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸುವ ಹಲವು ಕ್ರಮಗಳನ್ನು ಕೈಗೊಂಡಿದೆ. ಜುವೆನೈಲ್ ಜಸ್ಟಿಸ್ ಆಕ್ಟ್, ೨೦೧೫, ಅಗತ್ಯವಿರುವ ಮಕ್ಕಳ ಆರೈಕೆ ಮತ್ತು ರಕ್ಷಣೆಯನ್ನು ಖಚಿತಪಡಿಸುತ್ತದೆ. ಬಾಲಕಿಯರ ಭವಿಷ್ಯಕ್ಕಾಗಿ ಹೂಡಿಕೆ ಮಾಡುವುದು ಜಾಗತಿಕ ಸಮಾಜದ ಸಾಮೂಹಿಕ ಭವಿಷ್ಯದಲ್ಲಿ ನೇರ ಹೂಡಿಕೆ ಮಾಡುವುದಕ್ಕೆ ಸಮಾನವಾಗಿದೆ. ಪ್ರತಿ ಹೆಣ್ಣುಮಕ್ಕಳ ಹಕ್ಕುಗಳನ್ನು ರಕ್ಷಿಸಲು ಮತ್ತು ಅವರಿಗೆ ಅವರ ಸಂಪೂರ್ಣ ಸಾಮರ್ಥ್ಯದ ಕುರಿತು ಅರಿವು ಮೂಡಿಸುವ ಉದ್ದೇಶ ಈ ದಿನ ಹೊಂದಿದೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್