ಭಾರತ-ನ್ಯೂಜಿಲೆಂಡ್ ಟೆಸ್ಟ್​ ಪಂದ್ಯ : ಸಂಚಾರ ಮಾರ್ಪಾಡು
ಬೆಂಗಳೂರು, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆಯಿಂದ ರವಿವಾರದವರೆಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಅಂತಾರಾಷ್ಟ್ರೀಯ ಕ್ರಿಕೆಟ್ ಟೆಸ್ಟ್ ಪಂದ್ಯಾವಳಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 06:00
India vs New Zealand Test Cricket: Traffic Advisory


ಬೆಂಗಳೂರು, 15 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆಯಿಂದ ರವಿವಾರದವರೆಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಅಂತಾರಾಷ್ಟ್ರೀಯ ಕ್ರಿಕೆಟ್ ಟೆಸ್ಟ್ ಪಂದ್ಯಾವಳಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ಐದೂ ದಿನವು ವಾಹನ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಿ ಬೆಂಗಳೂರು ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ.

ವಾಹನಗಳ ನಿಲುಗಡೆ ನಿಷೇಧಕ್ಲೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ. ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವಂತಿಲ್ಲ.ಕಸ್ತೂರ್ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.ವಿಶ್ವಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ.ವಾಹನಗಳ ನಿಲುಗಡೆ ಸ್ಥಳಗಳುಯು.ಬಿ ಸಿಟಿ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದು.ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿಯಲ್ಲಿ ವಾಹನ ನಿಲುಗಡೆಗೆ ಅವಕಾಶವಿದೆ.ಕಿಂಗ್ಸ್ ರಸ್ತೆ, (ಕಬ್ಬನ್‌ ಪಾರ್ಕ್ ಒಳಭಾಗ) ವಾಹನ ನಿಲ್ಲಿಸಬಹುದು.ಕಬ್ಬನ್ ರಸ್ತೆಯಲ್ಲಿ: ಬಿ.ಆರ್.ವಿ ಜಂಕ್ಷನ್ ನಿಂದ ಸಿ.ಟಿ.ಓ ಸರ್ಕಲ್​ವರೆಗೆ ಕ್ಯಾಬ್/ಆಟೋರಿಕ್ಷಾಗಳು ಪ್ರಯಾಣಿಕರನ್ನು ಇಳಿಸುವ ಮತ್ತು ಹತ್ತಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande