ಸೊಪ್ಪು ಸೇವನೆಯಿಂದ ಸಿಗುವ ಪ್ರಯೋಜನ
ಹುಬ್ಬಳ್ಳಿ, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಇಂದಿನ ಆಧುನಿಕ ಕೃಷಿ ಪದ್ದತಿಯಿಂದ ನಾವು ಸೇವಿಸುವ ಆಹಾರ ಪದಾರ್ಥಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಸಾಯನಿಕ ಸೇರಿರುತ್ತದೆ. ನೈಸರ್ಗಿಕವಾಗಿ ಬೆಳೆಯುವ ಸೊಪ್ಪುಗಳು ಸೇವನೆಯಿಂದ ಮನುಷ್ಯನ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಅವುಗಳಲ್ಲಿ ದಂಟು , ರಾಜಗೀರ, ಹ
greens


ಹುಬ್ಬಳ್ಳಿ, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಇಂದಿನ ಆಧುನಿಕ ಕೃಷಿ ಪದ್ದತಿಯಿಂದ ನಾವು ಸೇವಿಸುವ ಆಹಾರ ಪದಾರ್ಥಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಸಾಯನಿಕ ಸೇರಿರುತ್ತದೆ. ನೈಸರ್ಗಿಕವಾಗಿ ಬೆಳೆಯುವ ಸೊಪ್ಪುಗಳು ಸೇವನೆಯಿಂದ ಮನುಷ್ಯನ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಅವುಗಳಲ್ಲಿ ದಂಟು , ರಾಜಗೀರ, ಹರಿವೆ, ಹಕ್ಕರಕಿ, ಅಣ್ಣೇ ಸೊಪ್ಪು , ಕಿರಿಕಸಾಲಿ, ಸೊಕ್ಕತ್ತಿ …ಹೀಗೆ ನೂರಾರು ಬಗೆಯ ಸೊಪ್ಪಿನ ತಳಿಗಳಿವೆ.

ಹೊಲ ಗದ್ದೆಗಳಲ್ಲಿ ತಾನಾಗಿ ಹುಟ್ಟಿ ಬೆಳೆಯುವ ‘ಕಳೆ’ ಎಂದು ನಿರ್ಲಕ್ಷಕ್ಕೆ ಗುರಿಯಾದ ಹಲವಾರು ಸೊಪ್ಪಿನ ತಳಿಗಳು ಔಷಧೀಯ ಗುಣಗಳಿಂದ ಸಮೃದ್ಧವಾಗಿವೆ. ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವಲ್ಲಿ ಸೊಪ್ಪಿನ ಪಾತ್ರ ಹಿರಿದು.

ಸೊಪ್ಪು ದೇಹಕ್ಕೆ ಬೇಕಾದ ಪೋಷಣೆ ಹಾಗೂ ಚೈತನ್ಯವನ್ನು ನೀಡುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಾರಿನಿಂದ ಸಮೃದ್ಧವಾಗಿರುವ ಸೊಪ್ಪನ್ನು ಸೇವಿಸುವುದರಿಂದ ಮಲಬದ್ಧತೆ, ಮಧು ಮೇಹ ರಕ್ತಹೀನತೆ, ಅಪೌಷ್ಟಿಕತೆ ಮತ್ತು ಇತರೆ ಹಲವು ಕಾಯಿಲೆಗಳಿಂದ ಮುಕ್ತಿ ಪಡೆಯಬಹುದು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande