ಭಾರತ-ನ್ಯೂಝಿಲೆಂಡ್ ಕ್ರಿಕೆಟ್ ಪಂದ್ಯಇಂದು ಶುರು
ಬೆಂಗಳೂರು, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯ ಇಂದು ಶುರುವಾಗುವ ನಿರೀಕ್ಷೆಯಿದೆ. ನಿನ್ನೆ ಆರಂಭವಾಗಬೇಕಿದ್ದ ಕ್ರಿಕೆಟ್ ಪಂದ್ಯದ ಮೊದಲ ದಿನದಾಟವು ಮಳೆಗೆ ಆಹುತಿಯಾಗಿತ್ತು. ಇಂದು ಗುರುವಾರ ಬೆಂಗಳೂರಿನಾದ್ಯಂತ ಮಳೆ ಕುಂಠಿತವಾಗಿದ
್್ೇ


ಬೆಂಗಳೂರು, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯ ಇಂದು ಶುರುವಾಗುವ ನಿರೀಕ್ಷೆಯಿದೆ.

ನಿನ್ನೆ ಆರಂಭವಾಗಬೇಕಿದ್ದ ಕ್ರಿಕೆಟ್ ಪಂದ್ಯದ ಮೊದಲ ದಿನದಾಟವು ಮಳೆಗೆ ಆಹುತಿಯಾಗಿತ್ತು. ಇಂದು ಗುರುವಾರ ಬೆಂಗಳೂರಿನಾದ್ಯಂತ ಮಳೆ ಕುಂಠಿತವಾಗಿದ್ದು, ಹೀಗಾಗಿ ಇಂದು ಪಂದ್ಯ ಶುರುವಾಗುವ ನಿರೀಕ್ಷೆಯಿದೆ.

ಇನ್ನು ಮೊದಲ ದಿನದಾಟ ರದ್ದಾಗಿರುವ ಕಾರಣ ಉಳಿದ ದಿನದಾಟಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅದರಂತೆ ಬೆಳಿಗ್ಗೆ 9.30 ರಿಂದ ಶುರುವಾಗಬೇಕಿರುವ ಪಂದ್ಯವನ್ನು 9.15 ಕ್ಕೆ ಆರಂಭಿಸಲು ನಿರ್ಧರಿಸಲಾಗಿದೆ. ಈ ಮೂಲಕ ಮೊದಲ ದಿನದಾಟದ ಸಮಯವನ್ನು ಸರಿದೂಗಿಸಲು ಯೋಜನೆ ರೂಪಿಸಲಾಗಿದೆ.

ದಿನದಾಟಗಳ ಸೆಷನ್ ಸಮಯ:ಬೆಳಗಿನ ಅವಧಿ: 9:15 -11:30ಮಧ್ಯಾಹ್ನದ ಅವಧಿ: 12:10 – 2:25ಸಂಜೆ ಅವಧಿ: 2:45 – 4:45ಉಭಯ ತಂಡಗಳು:

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.

ನ್ಯೂಝಿಲೆಂಡ್ ಟೆಸ್ಟ್ ತಂಡ: ಟಾಮ್ ಲ್ಯಾಥಮ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ವಿಲ್ ಓ’ರೂರ್ಕ್, ಅಜಾಝ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಕೇನ್ ವಿಲಿಯಮ್ಸನ್ (ಮೊದಲ ಪಂದ್ಯಕ್ಕೆ ಅಲಭ್ಯ), ಜೇಕೊಬ್ ಡಫಿ, ವಿಲ್ ಯಂಗ್, ಮೈಕೆಲ್ ಬ್ರೇಸ್‌ವೆಲ್ (ಮೊದಲನೇ ಟೆಸ್ಟ್​ಗೆ ಮಾತ್ರ), ಇಶ್ ಸೋಧಿ (ಮೊದಲ ಪಂದ್ಯಕ್ಕೆ ಅಲಭ್ಯ).

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande