ಭವಾನಿ ರೇವಣ್ಣ,ಜಾಮೀನು ರದ್ದತಿಗೆ ನಿರಾಕರಣೆ
ನವದೆಹಲಿ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ಎಚ್.​ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಉಚ್ಚ ನ್ಯಾಯಾಲಯ​ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸರ್ವೋಚ್ಚ ನ್ಯಾಯಾಲಯವು​ ಶುಕ್ರವಾರ ಹೇಳಿದೆ. ಇದರೊಂದಿಗೆ, ಭವಾನಿ ರೇವಣ್ಣ ನಿರಾಳರಾಗುವ
Big relief for JDS leader Bhavani Revanna in kidnap


ನವದೆಹಲಿ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ಎಚ್.​ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಉಚ್ಚ ನ್ಯಾಯಾಲಯ​ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸರ್ವೋಚ್ಚ ನ್ಯಾಯಾಲಯವು​ ಶುಕ್ರವಾರ ಹೇಳಿದೆ.

ಇದರೊಂದಿಗೆ, ಭವಾನಿ ರೇವಣ್ಣ ನಿರಾಳರಾಗುವಂತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.

ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande