ಮಾಜಿ ದೇವದಾಸಿ ಮಹಿಳೆಯರಿಗೆ ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಕೊಪ್ಪಳ , 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ದೇವದಾಸಿ ಪುನರ್ವಸತಿ ಯೋಜನೆಯ ಕೊಪ್ಪಳ ಜಿಲ್ಲಾ ಕಚೇರಿಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಮಾಜಿ ದೇವದಾಸಿ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವ
ಮಾಜಿ ದೇವದಾಸಿ ಮಹಿಳೆಯರಿಗೆ ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ


ಕೊಪ್ಪಳ , 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ದೇವದಾಸಿ ಪುನರ್ವಸತಿ ಯೋಜನೆಯ ಕೊಪ್ಪಳ ಜಿಲ್ಲಾ ಕಚೇರಿಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಮಾಜಿ ದೇವದಾಸಿ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದ್ದು, ಮಾಜಿ ದೇವದಾಸಿ ಮಹಿಳೆಯರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ನಾಲ್ಕು ಭಾವಚಿತ್ರಗಳು, ಅಭ್ಯರ್ಥಿಯ ಸ್ವಂತ ಹೆಸರಿನಲ್ಲಿರುವ ಖಾಲಿ ನಿವೇಶನದ ಖಾತೆ ಸಂಖ್ಯೆ, ಅಳತೆ ಮತ್ತು ಚೆಕ್‍ಬಂದಿ ಧೃಢೀಕರಣ ಪತ್ರ, ವಯಸ್ಸಿನ ಧೃಢೀಕರಣ ಪತ್ರ (ವೈದ್ಯಾಧಿಕಾರಿಗಳಿಂದ), ಆಧಾರ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್‍ಬುಕ್ ಹಾಗೂ ಯಾವುದೇ ಯೋಜನೆಯಡಿ ವಸತಿ ಸೌಲಭ್ಯ ಪಡೆದಿರುವುದಿಲ್ಲ ಎಂದು ಗ್ರಾಮ ಪಂಚಾಯತಿಯಿಂದ ಧೃಢೀಕರಣ ಪತ್ರ, ಈ ಎಲ್ಲಾ ದಾಖಲೆಗಳೊಂದಿಗೆ ಅರ್ಜಿಯನ್ನು ದ್ವಿ-ಪ್ರತಿಗಳಲ್ಲಿ ಯೋಜನಾಧಿಕಾರಿಗಳು ದೇವದಾಸಿ ಪುನರ್ವಸತಿ ಯೋಜನೆ ಮಳಿಗೆ ಸಂಖ್ಯೆ-29, ನಗರಾಭಿವೃದ್ಧಿ ಪ್ರಾಧಿಕಾರ ಹೊಸಪೇಟೆ ರಸ್ತೆ, ಕೊಪ್ಪಳ. ಇಲ್ಲಿಗೆ ಸಲ್ಲಿಸಬೇಕು.

ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೇವದಾಸಿ ಪುನರ್ವಸತಿ ಯೋಜನೆಯ ಕೊಪ್ಪಳ ಜಿಲ್ಲಾ ಕಚೇರಿಯನ್ನು ಸಂಪರ್ಕಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande