ಚನ್ನಪಟ್ಟಣ ಅಭ್ಯರ್ಥಿ ಗೊಂದಲ ಶೀಘ್ರ ಇತ್ಯರ್ಥ : ಪ್ರಲ್ಹಾದ ಜೋಶಿ
ನವದೆಹಲಿ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಹಾಗಾಗಿ ಎನ್ ಡಿಎ ಅಭ್ಯರ್ಥಿ ಆಯ್ಕೆಗೆ ಎಲ್ಲರೂ ಸೇರಿ ತೀರ್ಮಾನ ಮಾಡಬೇಕಾಗುತ್ತದೆ. ಎರಡು-ಮೂರು ದಿನದಲ್ಲಿ ಗೊಂದಲ ಬಗೆಹರಿಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗ
ಚನ್ನಪಟ್ಟಣ ಅಭ್ಯರ್ಥಿ ಗೊಂದಲ ಶೀಘ್ರ ಇತ್ಯರ್ಥ : ಪ್ರಲ್ಹಾದ ಜೋಶಿ


ನವದೆಹಲಿ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಹಾಗಾಗಿ ಎನ್ ಡಿಎ ಅಭ್ಯರ್ಥಿ ಆಯ್ಕೆಗೆ ಎಲ್ಲರೂ ಸೇರಿ ತೀರ್ಮಾನ ಮಾಡಬೇಕಾಗುತ್ತದೆ. ಎರಡು-ಮೂರು ದಿನದಲ್ಲಿ ಗೊಂದಲ ಬಗೆಹರಿಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಚನ್ನಪಟ್ಟಣ ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಜೆಡಿಎಸ್ ಸೇರಿಯೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಈಗಾಗಲೇ ನಾನು, ಪ್ರತಿ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಜತೆ ಚರ್ಚಿಸಿದ್ದೇವೆ. ವಿಜಯೇಂದ್ರ ಕುಮಾರಸ್ವಾಮಿ ಅವರೊಂದಿಗೂ ಮಾತನಾಡಿದ್ದಾರೆ ಎಂದು ಹೇಳಿದರು.

ಕುಮಾರಸ್ವಾಮಿ ಮತ್ತು ವಿಜಯೇಂದ್ರ ಇಬ್ಬರೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಜತೆ ಮಾತುಕತೆ ನಡೆಸಿದ್ದಾರೆ. ಕುಮಾರಸ್ವಾಮಿ ಇನ್ನೂ ತಮ್ಮ ಅಂತಿಮ ನಿರ್ಧಾರವನ್ನು ತಿಳಿಸಿಲ್ಲ ಎಂದರು.

ಚನ್ನಪಟ್ಟಣ ಸೇರಿದಂತೆ ರಾಜ್ಯದಲ್ಲಿ ಸಂಡೂರು, ಶಿಗ್ಗಾಂವಿ ಯಾವುದೇ ಕ್ಷೇತ್ರವಿರಲಿ ಅಭ್ಯರ್ಥಿ ಆಯ್ಕೆ ಅಂತಿಮವಾಗಿ ಪಕ್ಷದ ಹೈಕಮಾಂಡ್ ನಿರ್ಧಾರ ಎಂದ ಜೋಶಿ, ಬಿಜೆಪಿ ವರಿಷ್ಠರು ಜೆಡಿಎಸ್ ರಾಜ್ಯಾಧ್ಯಕ್ಷರು ಆಗಿರುವ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿಯೇ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.

ವಿಧಾನ ಸಭೆ ಉಪ ಚುನಾವಣೆಗೆ ದೇಶದ 48 ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೇ ಬಿಡುಗಡೆ ಆಗೋ ಸಾಧ್ಯತೆಯಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande