ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ
ಹುಬ್ಬಳ್ಳಿ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸ
ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ


ಹುಬ್ಬಳ್ಳಿ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಅವುಗಳ ವಿವರಗಳು ಇಲ್ಲಿದೆ.

ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06597/98) ರೈಲು ಸಂಚಾರ ರೈಲು ಸಂಖ್ಯೆ 06597 ಅಕ್ಟೋಬರ್ 30, 2024 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಮಧ್ಯಾಹ್ನ 1 ಗಂಟೆಗೆ ಹೊರಡಲಿರುವ ಈ ರೈಲು ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳ ಮೂಲಕ ಮರುದಿನ ಬೆಳಗಿನ ಜಾವ 4 ಗಂಟೆಗೆ ಕಾರವಾರ ನಿಲ್ದಾಣವನ್ನು ತಲುಪಲಿದೆ.

ಪುನಃ ಇದೇ ರೈಲು (06598) ಅಕ್ಟೋಬರ್ 31, 2024 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಹೊರಟು ಅದೇ ಮಾರ್ಗವಾಗಿ, ಮರುದಿನ ಬೆಳಗಿನ ಜಾವ್ 4 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ . ಈ ರೈಲಿನಲ್ಲಿ 4 ಸಾಮಾನ್ಯ, 10 ಸ್ಲೀಪರ್ ಕ್ಲಾಸ್, 2 ಎಸಿ ತ್ರಿ ಟೈಯರ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ / ಬ್ರೇಕ್ ವ್ಯಾನ್ಗಳು ಸೇರಿದಂತೆ 18 ಬೋಗಿಗಳು ಇರಲಿವೆ.

ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06565/66) ರೈಲು ಸಂಚಾರ

ರೈಲು ಸಂಖ್ಯೆ 06565 ಅಕ್ಟೋಬರ್ 30, 2024 ರಂದು ಯಶವಂತಪುರದಿಂದ ರಾತ್ರಿ 11.50ಕ್ಕೆ ಹೊರಡಲಿರುವ ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ಪುನಃ ಇದೇ ರೈಲು (06566) ಅಕ್ಟೋಬರ್ 31, 2024 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಂಕ್ಷನ್ ನಿಂದ ಹೊರಡಲಿರುವ ರೈಲು ಅದೇ ಮಾರ್ಗವಾಗಿ ಅದೇ ದಿನ ರಾತ್ರಿ 9:15 ಕ್ಕೆ ಯಶವಂತಪುರವನ್ನು ತಲುಪಲಿದೆ‌ ಎಂದು ನೈಋತ್ಯ ರೇಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande