ನಟ ಸಲ್ಮಾನ್‌ ಖಾನ್‌ಗೆ ಮತ್ತೆ ಬೆದರಿಕೆ
ಮುಂಬೈ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಅವರ ತಂಡ ಕೊಲೆ ಬೆದರಿಕೆ ಹಾಕಿದ್ದು, ದ್ವೇಷವನ್ನು ಕೊನೆಗಾಣಿಸಲು 5 ಕೋಟಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಮುಂಬೈ ಸಂಚಾರಿ ಪೊಲೀಸರಿಗೆ ಕಳುಹಿಸಲಾದ ವಾಟ್ಸಾಪ್ ಸಂದೇಶದಲ್ಲಿ, ಹಣವನ್ನು ನೀಡ
ಅವರ ತಂಡ


ಮುಂಬೈ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಅವರ ತಂಡ ಕೊಲೆ ಬೆದರಿಕೆ ಹಾಕಿದ್ದು, ದ್ವೇಷವನ್ನು ಕೊನೆಗಾಣಿಸಲು 5 ಕೋಟಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ.

ಮುಂಬೈ ಸಂಚಾರಿ ಪೊಲೀಸರಿಗೆ ಕಳುಹಿಸಲಾದ ವಾಟ್ಸಾಪ್ ಸಂದೇಶದಲ್ಲಿ, ಹಣವನ್ನು ನೀಡದಿದ್ದರೆ ನಟನ ಭವಿಷ್ಯವು ಇತ್ತೀಚೆಗೆ ಬಿಷ್ಣೋಯ್ ಅವರ ತಂಡ ಸದಸ್ಯರಿಂದ ಹತ್ಯೆಗೀಡಾದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿಗಿಂತ ಕೆಟ್ಟದಾಗಿರುತ್ತದೆ ಎಂದು ಎಚ್ಚರಿಸಿದೆ.

ನಟ ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂ. ಕೊಡಿ, ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಎಂದು ವಾಟ್ಸಾಪ್ ಸಂದೇಶದಲ್ಲಿ ಇದೆ ಎನ್ನಲಾಗಿದೆ.

ಮುಂಬೈ ಪೊಲೀಸರು ಸಂದೇಶದ ಮೂಲವನ್ನು ಪತ್ತೆ ಹಚ್ಚುವ ಕೆಲಸದಲ್ಲಿ ತೊಡಗಿದ್ದಾರೆ. ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಸುತ್ತಲೂ ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande