ಅಖಿಲ ಭಾರತ ನಾಗರಿಕ ರಕ್ಷಣಾ ಮತ್ತು ಗೃಹ ರಕ್ಷಕರ ಸಮಾವೇಶ
೧೪ನೇ ಅಖಿಲ ಭಾರತ ನಾಗರಿಕ ರಕ್ಷಣಾ ಮತ್ತು ಗೃಹ ರಕ್ಷಕರ ಸಮಾವೇಶವನ್ನು ಉದ್ಘಾಟಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ
All India Civil Defence and Home Guards conference


ಗಾಂಧಿನಗರ,22ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗುಜರಾತ್‌ನ ಗಾಂಧಿನಗರದಲ್ಲಿ ಮಹಾತ್ಮ ಮಂದಿರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ೧೪ನೇ ಅಖಿಲ ಭಾರತ ನಾಗರಿಕ ರಕ್ಷಣಾ ಮತ್ತು ಗೃಹ ರಕ್ಷಕರ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

ಗುಜರಾತ್‌ಗೆ ಭೇಟಿ ನೀಡಿರುವ ಶಾ ಅವರು ಆನಂದ್‌ನಲ್ಲಿರುವ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯ (ಎನ್‌ಡಿಡಿಬಿ) ೬೦ ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸಚಿವರು ಎನ್‌ಡಿಡಿಬಿಯ ಮೂರು ಹೊಸ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ನಂತರ, ಅವರು ಗುಜರಾತ್ ಅಸೆಂಬ್ಲಿಯಲ್ಲಿ ಶಾಸಕಾಂಗ ಕರಡು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಮತ್ತು ಶಾಸಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

೧೯ ವರ್ಷಗಳ ನಂತರ ೧೪ ನೇ ಭಾರತ ನಾಗರಿಕ ರಕ್ಷಣಾ ಮತ್ತು ಗೃಹ ರಕ್ಷಕರ ಸಮ್ಮೇಳನವನ್ನು ಆಯೋಜಿಸಲಾಗಿದೆ. ನಾನಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ೬೦ ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ಮತ್ತು ಸುಮಾರು ೧೨೦೦ ಸಿವಿಲ್ ಡಿಫೆನ್ಸ್ ಮತ್ತು ಹೋಮ್ ಗಾರ್ಡ್ ಸದಸ್ಯರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande