ಜಾತಿಗಣತಿ ವರದಿ ಅಂಗೀಕಾರಕ್ಕೆ ದಲಿತ ಸಂಘರ್ಷ ಸಮಿತಿಯಿಂದ ಮನವಿ
ಜಾತಿಗಣತಿ ವರದಿ ಅಂಗೀಕಾರಕ್ಕೆ ದಲಿತ ಸಂಘರ್ಷ ಸಮಿತಿಯಿಂದ ಮನವಿ
ಚಿತ್ರ - ಜಾತಿ ಗಣತಿ ವರದಿ ಅಂಗೀಕರಿಸಲು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಕೋಲಾರ ಜಿಲ್ಲಾಧಿಕಾರಿಗಳ ಮೂಲಕ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.


ಕೋಲಾರ, ೨೨ ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ, ಜಿಲ್ಲಾ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿಯನ್ನು ರವಾನಿಸಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹಾರೋಹಳ್ಳಿ ರವಿ ಮಾತನಾಡಿ, ಇತ್ತೀಚೆಗೆ ರಾಜ್ಯ ಸರ್ಕಾರವು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಗೆಳತಿ ವರದಿಯನ್ನು ಸ್ವೀಕರಿಸಿದ್ದನ್ನು, ದಲಿತ ಸಂಘರ್ಷ ಸಮಿತಿಯ ಸ್ವಾಗತಿಸಿ, ಅಭಿನಂದನೆ ಸಲ್ಲಿಸುತ್ತದೆ ಎಂದರು.

ರಾಜ್ಯದ ಜನಸಂಖ್ಯೆಯ ಬಹುಭಾಗವಾಗಿರುವ ಆದಿವಾಸಿಗಳು ಅಲೆಮಾರಿಗಳು ದಲಿತರು ಹಿಂದುಳಿದವರು ಅಲ್ಪಸಂಖ್ಯಾತರು ಮುಂತಾದ ಶೋಷಿತ ಸಮುದಾಯಗಳು ಹಲವು ದಶಕಗಳಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಾ ಬಂದಿದೆ . ಆದರೆ ಜಾತಿ ಕೇಂದ್ರಿತ ಪಕ್ಷ ರಾಜಕಾರಣವು ಈ ಸಮುದಾಯಗಳ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಉದ್ಯೋಗಿಕ ಸ್ಥಿತಿಗತಿಗಳನ್ನು ಉತ್ತಮ ಪಡಿಸಲು ಹೊಣೆಗಾರಿಕೆಯಿಂದ ನುಣಚಿಕೊಳ್ಳುತ್ತಿದ್ದವು. ಇದರಿಂದಾಗಿ ಸಮಾಜದಲ್ಲಿ ಅಸಮಾನತೆಯ ಕಂದಕಗಳು ಮತ್ತು ಹೆಚ್ಚಾಗುತ್ತಲೇ ಬರುತ್ತಿತ್ತು ಈ ನಿಟ್ಟಿನಲ್ಲಿ ಸಾಮಾಜಿಕ ನ್ಯಾಯದ ಗುರುಗಳನ್ನು ತಲುಪುವ ಕಾಲ ಕಾಲಕ್ಕೆ ಜಾತಿಗಣತಿಯ ನಿಖರ ವಿವರಗಳನ್ನು ಆಧರಿಸಿ ಇನ್ನಿತರ ಯೋಜನೆಗಳನ್ನು ರೂಪಿಸುವುದು ಅನಿವಾರ್ಯ ಈ ಕೊರತೆಯನ್ನು ತಮ್ಮ ಸರಕಾರವನ್ನು ನೀಗಿಸಲೋರಟಿರುವುದು ಇರುವುದು ನಿಜಕ್ಕೂ ಅಭಿನಂದನಾದದ್ದು ಎಂದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಚಲ್ದಿಗಾನಹಳ್ಳಿ ಮುನಿವೆಂಕಟಪ್ಪ, ಸಿ.ಜೆ.ನಾಗರಾಜ್, ಬಂದಾರ್ಲಹಳ್ಳಿ ಮುನಿಯಪ್ಪ, ಸೀಪೂರು ದೇವರಾಜ್, ವಾಸು, ಮುದುವಾಡಿಹೊಸಹಳ್ಳಿ ಶ್ರೀರಾಮ, ಶ್ರೀನಿವಾಸ್, ಮುನಿರಾಜು ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ - ಜಾತಿ ಗಣತಿ ವರದಿ ಅಂಗೀಕರಿಸಲು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಕೋಲಾರ ಜಿಲ್ಲಾಧಿಕಾರಿಗಳ ಮೂಲಕ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande