ಜಾತಿಗಣತಿ ವರದಿ ಎಲ್ಲ ಸಮುದಾಯಗಳಿಗೆ ತಿಳಿಯಬೇಕು-ಗೃಹ ಸಚಿವ ಜಿ. ಪರಮೇಶ್ವರ್
ಸಂಪುಟದಲ್ಲಿ ಚರ್ಚಿಸಿ ಜಾತಿಗಣತಿ ವರದಿ ಬಿಡುಗಡೆಗೆ ರಾಜ್ಯ ಸರ್ಕಾರ ತೀರ್ಮಾನ
Paramesh


ಬೆಂಗಳೂರು, 22 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜಾತಿಗಣತಿ ವರದಿಯಲ್ಲಿ ಏನಿದೆ ಎಂಬುದು ಎಲ್ಲ ಸಮುದಾಯಗಳಿಗೆ ತಿಳಿಯಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿಯನ್ನು ಸಚಿವ ಸಂಪುಟದ ಮುಂದೆ ಪ್ರಸ್ತಾಪಿಸಿ ಸಾಧಕ-ಬಾಧಕಗಳನ್ನು ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

ಜಾತಿಗಣತಿ ವರದಿಗೆ ೧೬೫ ಕೋಟಿ ರೂಪಾಯಿ ಖರ್ಚು ಮಾಡಲಾಗಿದ್ದು, ಈ ಹಣ ವ್ಯರ್ಥವಾಗಬಾರದು ಎಂದು ಅಭಿಪ್ರಾಯಪಟ್ಟರು. ಪಂಚಮಸಾಲಿ, ಒಳಮೀಸಲಾತಿ, ಎಲ್ಲವನ್ನು ನಿಭಾಯಿಸುವ ಸಾಮರ್ಥ್ಯ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಹೇಳಿದ ಅವರು, ಈ ಕುರಿತು ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande