ರೈತರಿಗೆ ಪುನಃ ಬಿತ್ತನೆ ಬೀಜ ವಿತರಿಸುವ ಕುರಿತು ಪ್ರಸ್ತಾವನೆ : ಸಂತೋಷ್ ಲಾಡ್
ಧಾರವಾಡ, 22 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅತಿಯಾದ ಮಳೆಯಿಂದಾಗಿ, ಮುಂಗಾರಿನ ಫಸಲು ಕೊಯ್ಲು ಹಂತದಲ್ಲಿ ನಾಶವಾಗಿದ್ದು, ಹಿಂಗಾರು ಬಿತ್ತನೆ ಮಾಡಿದ್ದ ಬೀಜಗಳು ಕೊಚ್ಚಿಕೊಂಡು ಹೋಗಿ ನಾಟಿ ಬಂದಿಲ್ಲ. ಆದ್ದರಿಂದ ಈಗಾಗಲೇ ಕೃಷಿ ಇಲಾಖೆಯಿಂದ ಹಿಂಗಾರು ಬಿತ್ತನೆಗೆ ಬೀಜ ಪಡೆದಿದ್ದ ರೈತರಿಗೆ ಮತ್ತೊಮ್ಮೆ ರಿಯಾ
Kdp meeting


ಧಾರವಾಡ, 22 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಅತಿಯಾದ ಮಳೆಯಿಂದಾಗಿ, ಮುಂಗಾರಿನ ಫಸಲು ಕೊಯ್ಲು ಹಂತದಲ್ಲಿ ನಾಶವಾಗಿದ್ದು, ಹಿಂಗಾರು ಬಿತ್ತನೆ ಮಾಡಿದ್ದ ಬೀಜಗಳು ಕೊಚ್ಚಿಕೊಂಡು ಹೋಗಿ ನಾಟಿ ಬಂದಿಲ್ಲ. ಆದ್ದರಿಂದ ಈಗಾಗಲೇ ಕೃಷಿ ಇಲಾಖೆಯಿಂದ ಹಿಂಗಾರು ಬಿತ್ತನೆಗೆ ಬೀಜ ಪಡೆದಿದ್ದ ರೈತರಿಗೆ ಮತ್ತೊಮ್ಮೆ ರಿಯಾತಿಯಲ್ಲಿ ಬಿತ್ತನೆ ಬೀಜ ವಿತರಿಸಲು ಅಗತ್ಯವಿರುವ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಬೇಕೆಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ 2024-25 ನೇ ಸಾಲಿನ ಸೆಪ್ಟೆಂಬರ್‌ ಅಂತ್ಯಕ್ಕೆ ಕೊನೆಗೊಂಡ 2ನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನೇಕ ಇಲಾಖೆಗಳು ತಮಗೆ ನಿಗದಿಪಡಿಸಿದ ಆರ್ಥಿಕ ಮತ್ತು ಭೌತಿಕ ಗುರಿಯನ್ನು ತಲುಪಿದ್ದು, ಇದು ಉತ್ತಮ ಪ್ರಗತಿ ಆಗಿದೆ. ಇನ್ನೂ ಕೆಲವು ಇಲಾಖೆಗಳು ಪ್ರಗತಿಯಲ್ಲಿ ಹಿಂದುಳಿದಿದ್ದು, ಅವರು ಸಹ ನಿಗದಿತ ಗುರಿ ಸಾಧಿಸಬೇಕೆಂದು ಸಚಿವ ಸಂತೋಷ್ ಲಾಡ್ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande