ಮಳೆ ಹಾನಿ ಪರಿಹಾರಕ್ಕೆ ಗುರುವಾರ ಪ್ರತಿಭಟನೆ
ಧಾರವಾಡ, 22 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ನವಲಗುಂದ ವಿಧಾನ ಸಭಾ ಕ್ಷೇತ್ರದಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಯಿಂದ ರೈತ ಸಮೂಹ ಕಂಗಲಾಗಿದೆ. ಮನೆಗಳು ಬಿದ್ದು ಪ್ರಾಣಹಾನಿ ಸಂಭವಿಸಿದ್ದರೂ ಸರಕಾರ ಯಾವುದೇ ಕ್ರಮ ಜರುಗಿಸದೇ ಇರುವ ಹಿನ್ನೆಲೆಯಲ್ಲಿ ಇದೇ ಗುರುವಾರದಂದು ನವಲಗುಂದ ಪಟ್ಟಣದಲ್ಲಿ ಬೃಹತ್ ಪ್ರ
Crop


ಧಾರವಾಡ, 22 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ನವಲಗುಂದ ವಿಧಾನ ಸಭಾ ಕ್ಷೇತ್ರದಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಯಿಂದ ರೈತ ಸಮೂಹ ಕಂಗಲಾಗಿದೆ. ಮನೆಗಳು ಬಿದ್ದು ಪ್ರಾಣಹಾನಿ ಸಂಭವಿಸಿದ್ದರೂ ಸರಕಾರ ಯಾವುದೇ ಕ್ರಮ ಜರುಗಿಸದೇ ಇರುವ ಹಿನ್ನೆಲೆಯಲ್ಲಿ ಇದೇ ಗುರುವಾರದಂದು ನವಲಗುಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಚಿವ ಶಂಕರ ಪಾಟೀಲ, ಮುನೇನಕೊಪ್ಪ ಹೇಳಿದ್ದಾರೆ.

ನವಲಗುಂದ ತಾಲೂಕಿನ ತೀರ್ಲಾಪುರ, ಹನಸಿ, ಶಿರಕೋಳ, ಮೊರಬ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಮೆಣಸಿನಕಾಯಿ, ಕಡಲೆ, ಶೇಂಗಾ, ಪೇರಲ ಬೆಳೆಗಳು ಹಾನಿಯಾಗಿವೆ ಆದರೆ ಇದುವರೆಗೂ ಸರಕಾರ ಸ್ಪಂದಿಸಿಲ್ಲ ಎಂದು ಆರೋಪಿಸಿದ್ದಾರೆ. ಆಡಳಿತ ವ್ಯವಸ್ಥೆಯ ಕ್ರಮ ಖಂಡಿಸಿ ಇದೇ ಗುರುವಾರ ನವಲಗುಂದ ಪಟ್ಟಣದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande